ಬೆಂಗಳೂರು:ವಿಚ್ಛೇದನ ಕೋರಿ ಸಲ್ಲಿಸಿದ್ದ ಪ್ರಕರಣವೊಂದರಲ್ಲಿ ಪಾಟಿ ಸವಾಲು ಎದುರಿಸಲು ಪತಿ ಅಮೆರಿಕದಿಂದ ಬರಬೇಕಿರುವ ಹಿನ್ನೆಲೆಯಲ್ಲಿ ಆತನ ಪ್ರಯಾಣಕ್ಕೆ ತಗುಲುವ ೧.೬೫ ಲಕ್ಷ ರೂ. ಭರಿಸುವಂತೆ ಪತ್ನಿಗೆ ನಿರ್ದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ತಕರಾರು ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನ್ಯಾಯಪೀಠ, ಕೌಟುಂಬಿಕ ನ್ಯಾಯಾಲಯದ ಈ ಆದೇಶಕ್ಕೆ ಅಚ್ಚರಿ ವ್ಯಕ್ತಪಡಿಸಿದೆ. ಅಲ್ಲದೆ, ಅಂಬಿಕಾ ಮಾಸಿಕ ೨೦ ಸಾವಿರ ರೂ. ಜೀವನಾಂಶ ಪಾವತಿಸಲು ಆಶೋಕ್‌ಗೆ ಆದೇಶಿಸಿದೆ. ಈ ಮೊತ್ತ ಪಾವತಿಸಲು ಕೋರ್ಟ್ ಆದೇಶ ನೀಡಿದೆ ಎಂದರೆ, ಅರ್ಜಿದಾರರಿಗೆ ಜೀವನಾಧಾರಕ್ಕೆ ಯಾವುದೇ ಆದಾಯವಿಲ್ಲ ಎಂಬುದು ತಿಳಿಯುತ್ತದೆ. ಇಂತಹ ಸಂದರ್ಭದಲ್ಲಿ ಅಮೆರಿಕದಲ್ಲಿ ಉದ್ಯೋಗ ಮಾಡುತ್ತಾ ಆದಾಯ ಗಳಿಸುತ್ತಿರುವ ಸೂರ್ಯ ಅವರು ನಗರದ ಕೌಟುಂಬಿಕ ನ್ಯಾಯಾಲಯದ ಪಾಟಿ ಸವಾಲಿಗೆ ಬಂದು ಹೋಗಲು ಪ್ರಯಾಣ ವೆಚ್ಚ ಭರಿಸುವಂತೆ ಗೀತಾಗೆ ಆದೇಶಿಸಿರುವುದಲ್ಲಿ ಯಾವುದೇ ತರ್ಕವಿಲ್ಲ. ಗೀತಾ ಅವರು ಇಷ್ಟು ದೊಡ್ಡ ಮೊತ್ತವನ್ನು ಸೂರ್ಯ ಪ್ರಯಾಣಕ್ಕೆ ತಗುಲುವ ವೆಚ್ಚ ಭರಿಸಲು ಹೇಗೆ ಸಮರ್ಥರಿದ್ದಾರೆ ಎಂಬುದನ್ನು ಕೌಟುಂಬಿಕ ನ್ಯಾಯಾಲಯ ಯೋಚಿಸಬೇಕಿದೆ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ತಮ್ಮ ವಿವಾಹ ವಿಚ್ಛೇದನ ಅಂತಹ ಗಂಭೀರ ಪ್ರಕರಣದಲ್ಲಿ ಸೂರ್ಯ ಅವರನ್ನು ಪಾಟಿ ಸವಾಲಿಗೆ ಗುರುಪಡಿಸುವುದು ಅಂಬಿಕಾ ಅವರ ಹಕ್ಕು ಆಗಿರುತ್ತದೆ. ಯಾವುದೇ ಸಂದರ್ಭದಲ್ಲಾದರೂ ಹೊರಲು ಸಾಧ್ಯವಿಲ್ಲದ ಪರಿಸ್ಥಿತಿಯನ್ನು ನ್ಯಾಯಾಲಯವು ಪ್ರಕರಣದ ಪಕ್ಷಗಾರರ ಮೇಲೆ ಹೊರಿಸಬಾರದು. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶವು ಕಾನೂನು ಬಾಹಿರವಾಗಿದೆ. ಸೂರ್ಯ ಅವರೇ ವಿವಾಹ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾನೆ. ಪಾಟಿ ಸವಾಲುಗೆ ಒಳಪಡಲು ಅಮೆರಿಕದಿಂದ ಭಾರತಕ್ಕೆ ಬಂದು ಹೋಗಲು ಪ್ರಯಾಣ ವೆಚ್ಚ ಭರಿಸಲಾಗದ ಬಡತನದಲ್ಲಿ ಅವರಿಲ್ಲ. ಒಂದೊದೆಡೆ ಗೀತಾ ವಿವಾಹ ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ, ಆಗ ವಿಭಿನ್ನ ಪರಿಗಣನೆಯ ಅಂಶ ಉದ್ಭವಿಸುತ್ತಿತ್ತು ಎಂದು ಪೀಠ ಹೇಳಿದೆ.