ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಹಾಗೂ ಕಾರ್ಪೋರೇಟರ್ ಜಾಕೀರ್ ಹುಸೇನ್ ಸಿಸಿಬಿ ಪೊಲೀಸರ ಎದುರು ಶರಣಾಗುವುದು ಅನಿವಾರ್ಯವಾಗಿದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಶರಣಾಗಲು ಇಬ್ಬರು ಆರೋಪಿಗಳಿಗೆ ಮೂರು ಅವಕಾಶಗಳಿವೆ.
ಸಿಸಿಬಿ ಪೊಲೀಸರು ಈ ಪ್ರಕರಣದ ಬಗ್ಗೆ ಹಲವು ಸಾಕ್ಷಿಗಳನ್ನು ಸಂಗ್ರಹಿಸಿದ್ದು, ಸಂಪತ್ ರಾಜ್ ಮೇಲೆನ ಆರೋಪ ದೃಢವಾಗುವ ಸಾಧ್ಯತೆ ಇದೆ. ಹೀಗಾಗಿ ಸಂಪತ್ ರಾಜ್ ಸಿಸಿಬಿ ಪೊಲೀಸರ ಎದುರು ಬಂದು ಶರಣಾಗಬೇಕು ಅಥವಾ ನ್ಯಾಯಾಲಯದೆದುರು ಶರಣಾಗಬೇಕು ಅಥವಾ ನಿರೀಕ್ಷಣಾ ಜಾಮೀನು ಪಡೆದು ತನಿಖೆಗೆ ಸಹಕಾರ ನೀಡುವುದು ಅನಿವಾರ್ಯವಾಗಿದೆ ಎನ್ನಲಾಗುತ್ತಿದೆ.