ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆ ಒಂದೆಡೆ ಸಿಸಿಬಿ ಹಾಗೂ ಡಿ.ಜೆ.ಹಳ್ಳಿ ಪೊಲೀಸರು ಬಿರುಸಿನಿಂದ ನಡೆಸುತ್ತಿದ್ದಾರೆ. ಮತ್ತೊಂದೆಡೆ ಇಂದಿನಿಂದ ಮ್ಯಾಜಿಸ್ಟ್ರೇಟ್ ತನಿಖೆ ಆರಂಭವಾಗಲಿದೆ.
ಬೆಂಗಳೂರು ಗಲಭೆ ಪ್ರಕರಣ: ಇಂದಿನಿಂದ ಮ್ಯಾಜಿಸ್ಟ್ರೇಟ್ ತನಿಖೆ - Lawyer Akhand Srinivas Murthy
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮ್ಯಾಜಿಸ್ಟ್ರೇಟ್ ತನಿಖೆ ಆರಂಭವಾಗಲಿದೆ.
ಗಲಭೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಸರ್ಕಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(NHRC) ಮಾರ್ಗಸೂಚಿ ಅನ್ವಯ ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ಡಿ.ಜೆ.ಹಳ್ಳಿಗೆ ಡಿಸಿ ಶಿವಮೂರ್ತಿ ನೇತೃತ್ವದ ತಂಡ ಭೇಟಿ ಕೊಟ್ಟು ಠಾಣೆ ಬಳಿ ಮಾಹಿತಿ ಕಲೆಹಾಕಲಿದೆ. ಈಗಾಗಲೇ ಸುಮಾರು 400ಕ್ಕೂ ಹೆಚ್ಚು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಗೆಯೇ ಆರೋಪಿಗಳಿಂದ ಕೆಲ ಮಾಹಿತಿಗಳನ್ನ ಪೊಲೀಸರು ಕಲೆಹಾಕಿದ್ದಾರೆ. ಹೀಗಾಗಿ ಮ್ಯಾಜಿಸ್ಟ್ರೇಟ್ ತನಿಖಾಧಿಕಾರಿಗಳು ಘಟನೆಯ ಸಂಪೂರ್ಣ ಮಾಹಿತಿಯನ್ನ ಇಂಚಿಚೂ ಕಲೆಹಾಕಲಿದ್ದಾರೆ. ಘಟನೆ ನಡೆದ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣೆ, ಹಾಗೆಯೇ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ, ಫೇಸ್ಬುಕ್ ಪೋಸ್ಟ್ ಮಾಡಿದ್ದ ನವೀನ್ ಮನೆ, ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಬಗ್ಗೆ ಪರಿಶೀಲಿಸಿ ವರದಿ ತಯಾರಿಸಲಿದೆ.