ಕರ್ನಾಟಕ

karnataka

ETV Bharat / state

ರಾಜ್ಯದ ಯೋಜನೆಗಳಿಗೆ ಅನುಮತಿ ನೀಡಿ... ಕೇಂದ್ರ ಸಚಿವರ ಮೇಲೆ ಡಿ.ಕೆ. ಬ್ರದರ್ಸ್​ ಒತ್ತಡ - ಡಿ.ವಿ. ಸದಾನಂದಗೌಡ

ಸೋದರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರೊಂದಿಗೆ ದೆಹಲಿಗೆ ತೆರಳಿದ ಸಚಿವ ಡಿ.ಕೆ.ಶಿವಕುಮಾರ್​, ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರನ್ನು ಭೇಟಿ ಮಾಡಿದರು.

ಕೇಂದ್ರ ಸಚಿವರ ಮೇಲೆ ಡಿ.ಕೆ. ಬ್ರದರ್ಸ್​ ಒತ್ತಡ

By

Published : Jun 18, 2019, 4:19 AM IST

ಬೆಂಗಳೂರು: ಸಚಿವ ಡಿ.ಕೆ. ಶಿವಕುಮಾರ್ ಸೋಮವಾರ ದೆಹಲಿಯಲ್ಲಿ ರಾಜ್ಯದ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಕರ್ನಾಟಕದಿಂದ ಕೇಂದ್ರ ಸಂಪುಟ ಪ್ರತಿನಿಧಿಸುವ ಸಚಿವರಾದ ಡಿ.ವಿ. ಸದಾನಂದಗೌಡ ಮತ್ತು ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿದ ಡಿ.ಕೆ. ಸಹೋದರರು, ಕೃಷ್ಣ, ಮಹದಾಯಿ, ಮೇಕೆದಾಟು ಸೇರಿದಂತೆ ರಾಜ್ಯದ ಯೋಜನೆಗಳಿಗೆ ಅನುಮತಿ ಕೊಡಿಸಲು ನೆರವಾಗುವಂತೆ ಮನವಿ ಮಾಡಿದರು.

ಕೇಂದ್ರ ಸಚಿವರ ಮೇಲೆ ಡಿ.ಕೆ. ಬ್ರದರ್ಸ್​ ಒತ್ತಡ

ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ, ರೈಲ್ವೇ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೃಷ್ಣ ಜಲವಿವಾದ-ll, ಮೇಕೆದಾಟು ಸಮತೋಲನ ಅಣೆಕಟ್ಟು ಯೋಜನೆ, ಮಹದಾಯಿ ಕುಡಿಯುವ ನೀರು ಯೋಜನೆ ಹಾಗೂ ವಿದ್ಯುತ್ ಉತ್ಪಾದನೆ ಯೋಜನೆಗಳಿಗೆ ಅನುಮತಿ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸದಾನಂದಗೌಡರಲ್ಲಿ ಮನವಿ ಮಾಡಿದರು.

ಇನ್ನು ಸುರೇಶ್ ಅಂಗಡಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳ ಕಾಮಗಾರಿ ಚುರುಕುಗೊಳಿಸುವುದು, ಬೆಂಗಳೂರು ರೈಲ್ವೆ ನಿಲ್ದಾಣ ಅಭಿವೃದ್ಧಿ, ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಸಂಬಂಧ ಚರ್ಚೆ ನಡೆಸಿದರು.

ABOUT THE AUTHOR

...view details