ಬೆಂಗಳೂರು: ರಾಜರಾಜೇಶ್ವರಿ ನಗರದ ಟಿಕೆಟ್ ಆಕಾಂಕ್ಷಿ ದಿವಂಗತ ಡಿ.ಕೆ.ರವಿ ಪತ್ನಿ ಕುಸುಮ ಇಂದು ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು.
ಆರ್.ಆರ್.ನಗರ ಕೈ ಟಿಕೆಟ್ ಆಕಾಂಕ್ಷಿ ಡಿ.ಕೆ.ರವಿ ಪತ್ನಿ ಕುಸುಮ ಆದಿಚುಂಚನಗಿರಿ ಮಠಕ್ಕೆ ಭೇಟಿ - ಬೆಂಗಳೂರು ಅಪ್ಡೇಟ್
ಕುಸುಮ ತಮ್ಮ ತಂದೆ ಹನುಮಂತರಾಯಪ್ಪ ಜೊತೆ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದ ಸ್ವಾಮಿಗಳ ಆಶೀರ್ವಾದ ಪಡೆದರು.
ಡಿ.ಕೆ.ರವಿ ಪತ್ನಿ ಕುಸುಮ ಆದಿಚುಂಚನಗಿರಿ ಮಠಕ್ಕೆ ಭೇಟಿ
ರಾಜರಾಜೇಶ್ವರಿ ನಗರದಲ್ಲಿ ದಿವಂಗತ ಡಿ.ಕೆ.ರವಿ ಪತ್ನಿ ಕುಸುಮ ಹೆಸರು ಮುಂಚೂಣಿಯಲ್ಲಿದೆ. ಇದೇ ವೇಳೆ ಕುಸುಮ ತಮ್ಮ ತಂದೆ ಹನುಮಂತರಾಯಪ್ಪ ಜೊತೆ ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದ ಸ್ವಾಮಿಗಳ ಆಶೀರ್ವಾದ ಪಡೆದರು.
ಕುಸುಮ ರಾಜರಾಜೇಶ್ವರಿ ನಗರದಿಂದ ಕಾಂಗ್ರೆಸ್ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಆರ್.ಆರ್. ನಗರದಿಂದ ಸ್ಪರ್ಧೆ ಬಯಸಿ ಹಲವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಇದರಲ್ಲಿ ಕುಸುಮ ಹೆಸರು ಮುಂಚೂಣಿಯಲ್ಲಿದೆ. ಇದೀಗ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ.