ಬೆಂಗಳೂರು:ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ನಿವಾಸ, ಕಚೇರಿಗಳ ಮೇಲೆ ಇಡಿ(ಜಾರಿ ನಿರ್ದೇಶನಾಲಯ) ಇಂದು ದಾಳಿ ನಡೆಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಇಡಿ ಅಧಿಕಾರಿಗಳ ದಾಳಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಒಳಗೊಳಗೆ ಬಹಳ ಖುಷಿಯಾಗಿದ್ದಾರೆ. ಸಿದ್ದರಾಮಯ್ಯನವರಿಗೆ ಗೊತ್ತಾಗಬಾರದು ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಓದಿ: ಜಮೀರ್ ನಿವಾಸದ ಮೇಲೆ ಇಡಿ ದಾಳಿ: ಕಾಂಗ್ರೆಸ್ ನಾಯಕರಲ್ಲಿ ಮತ್ತೆ ಆತಂಕ
ಡಿ ಕೆ ಶಿವಕುಮಾರ್ ಡಬಲ್ ಸ್ಟ್ಯಾಂಡ್ ರೀತಿ ಮಾತನಾಡುತ್ತಾರೆ. ಡಿಕೆಶಿ, ಸಿದ್ದು ಕಾಲದಲ್ಲಿ ಏನೇನು ಆಗಿದೆ ಎಂದು ಸವಿಸ್ತಾರವಾಗಿ ಮಾಧ್ಯಮಗಳಲ್ಲಿ ತೋರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಡಿಕೆಶಿ ಮೇಲೆ ಕೇಸ್ಗಳಿವೆ. ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಕೈ ಮಾಡಿ ತೋರಿಸಿದ್ದು, ಒಂದು ಬೆರಳು ಬಿಜೆಪಿ ಕಡೆ ತೋರಿಸಿದ್ರೆ, ನಾಲ್ಕು ಬೆರಳು ಅವರ ಕಡೆ ತೋರಿಸುತ್ತವೆ ಎಂದು ಟಾಂಗ್ ನೀಡಿದರು.
ಓದಿ: ಜಮೀರ್ ಅಹಮದ್ ಮನೆ, ಕಚೇರಿಗಳ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ: ಅಲ್ತಾಫ್ ಖಾನ್