ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿವಿಧ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು. ತಮ್ಮ ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ಭೇಟಿ ಹಾಗೂ ಸಭೆ ನಡೆಸಿ ಹಲವು ವಿಚಾರಗಳ ಚರ್ಚೆ ನಡೆಸಿದ್ದಾರೆ.
ಬೆಂಗಳೂರು ಇಸ್ಕಾನ್ನ ನವೀನ್ ಕೃಷ್ಣ ದಾಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಸನ್ಮಾನಿಸಿ, ಪ್ರಸಾದ ನೀಡಿದರು. ಇದಾದ ಬಳಿಕ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಮೆ. ಫಾದರ್ ಸಿ.ಫ್ರಾನ್ಸಿಸ್, ಕಾಂಗ್ರೆಸ್ ಮುಖಂಡ ಪ್ರವೀಣ್ ಪೀಟರ್ ಡಿಕೆಶಿಯನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಇದೇ ವೇಳೆ ಕಾಂತರಾಜ್ ಉಪಸ್ಥಿತರಿದ್ದರು.