ಬೆಳಗಾವಿ:ರಾಜ್ಯ ಸರ್ಕಾರಕ್ಕೆ ಸಾರಿಗೆ ನೌಕರರ ದುಃಖ, ದುಮ್ಮಾನ, ಭಾವನೆ ಹಾಗೂ ಶ್ರಮದ ಅರಿವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರ ಮಾಡುವ ಬಗ್ಗೆ ಸಾರಿಗೆ ನೌಕರರು ಇವತ್ತು ಹೇಳಿದ್ದಲ್ಲ. ಸರ್ಕಾರಕ್ಕೆ ಮೊದಲು ಹೇಳಿಯೇ ಮುಷ್ಕರ ನಡೆಸುತ್ತಿದ್ದಾರೆ.
ಸಾರಿಗೆ ನೌಕರರ ಜೊತೆಗೆ ಮಾತನಾಡಿ ಸರ್ಕಾರ ಅವರ ಬೇಡಿಕೆ ಈಡೇರಿಸಬೇಕು. ರಾಜ್ಯದಲ್ಲಿರುವ ಸಾರಿಗೆ ಸಂಸ್ಥೆ ಸಾರ್ವಜನಿಕ ವಲಯದ್ದಾಗಿದೆ. ಸಾರಿಗೆ ಸಂಸ್ಥೆಯನ್ನು ಸರ್ಕಾರ ವ್ಯಾಪಾರದ ದೃಷ್ಟಿಯಿಂದ ನೋಡಬಾರದು. ಎಲ್ಲಾ ಸಮಸ್ಯೆಗೂ ಒಂದು ಪರಿಹಾರ ಇದ್ದೇ ಇರುತ್ತೆ. ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಸರ್ಕಾರ ತಪ್ಪಿಸಬೇಕು. ಸಾರಿಗೆ ಸಂಸ್ಥೆ ನೌಕರರು ಮಾಡುತ್ತಿರುವ ಮುಷ್ಕರಕ್ಕೆ ಕಾಂಗ್ರೆಸ್ ಬೆಂಬಲ ಇದೆ ಎಂದರು.
ಉಪಚುನಾವಣೆ ವೇಳೆ ಸಿಎಂ ಮರಾಠ ಸಮಾಜಕ್ಕೆ ಹಣ ಬಿಡುಗಡೆ ಮಾಡಿದ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಸಿಎಂ ಬಿಎಸ್ವೈ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಮರಾಠ ಸಮುದಾಯ ಯಾವ ನಿಗಮವನ್ನು ಸಹ ಕೇಳಿರಲಿಲ್ಲ ಎಂದು ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ ವ್ಯಕ್ತಪಡಿಸಿದರು.