ಬೆಂಗಳೂರು :ಬೇರೆ ಪಕ್ಷದಿಂದ ಬಂದು, ಗುಂಪು ಕಟ್ಟಿ ಪಕ್ಷ ಹಾಳು ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಹಲವು ಸ್ಥಳೀಯ ಬಿಜೆಪಿ-ಜೆಡಿಎಸ್ ನಾಯಕರನ್ನ ಕಾಂಗ್ರೆಸ್‌ಗೆ ಸೇರ್ಪಡೆಗೊಳಿಸಿ ಬಳಿಕ ಮಾತನಾಡಿದ ಅವರು, ಬೇರೆ ಪಕ್ಷದಿಂದ ಬಂದು ಗುಂಪು ಮಾಡಿ, ಪಕ್ಷ ಹಾಳು ಮಾಡಬೇಡಿ. ಪಕ್ಷ ಪೂಜೆ ಮಾಡಿ, ವ್ಯಕ್ತಿ ಪೂಜೆ ಮಾಡಬೇಡಿ. ಯಾವುದೇ ಕಾರಣಕ್ಕೂ ಗೊಂದಲ ಆಗಬಾರದು ಎಂದಿದ್ದಾರೆ.
ಜೆಡಿಎಸ್-ಬಿಜೆಪಿಯ ಎಷ್ಟು ನಾಯಕರು ನನ್ನ ಸಂಪರ್ಕದಲ್ಲಿ ಇದ್ದಾರೆ ಎಂದು ನಾನು ಹೇಳಲ್ಲ. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರೋದಿಲ್ಲ ಎಂದು ಬಿಜೆಪಿ ಶಾಸಕರು, ಸಚಿವರಿಗೆ ಮನವರಿಕೆ ಆಗಿದೆ. ಹಾಸನ ಜಿಲ್ಲೆಯಲ್ಲಿ ಪಕ್ಷಕ್ಕೆ ಉತ್ತಮ ವಾತಾವರಣ ಇದೆ.