ಕರ್ನಾಟಕ

karnataka

ETV Bharat / state

ಗಡಿ ವಿಚಾರದಲ್ಲಿ ಎಲ್ಲರೂ ರಾಜಕಾರಣ ಮಾಡುತ್ತಿದ್ದಾರೆ: ಡಿ ಕೆ ಶಿವಕುಮಾರ್ - ಸಿಎಂ ಬಸವರಾಜ ಬೊಮ್ಮಾಯಿ

ರಾಜಕೀಯ ಲಾಭಕ್ಕಾಗಿ ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಸೃಷ್ಟಿಸಲಾಗುತ್ತಿದೆ. ಚುನಾವಣಾ ವೇಳೆ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು.

dk shivakumar
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

By

Published : Dec 1, 2022, 11:26 AM IST

ಬೆಂಗಳೂರು: ಗಡಿ ವಿಚಾರದಲ್ಲಿ ಎಲ್ಲರೂ ಕೂಡ ರಾಜಕಾರಣ ಮಾಡ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ರಾಜಕೀಯ ಲಾಭಕ್ಕೆ ಗಡಿವಿವಾದ ಸೃಷ್ಟಿಸಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ. ಯಾವುದೇ ಪಕ್ಷವಾಗಿದ್ದರೂ ಮಹಾರಾಷ್ಟ್ರ ಸರ್ಕಾರ ಮಾಡ್ತಿರೋದು ತಪ್ಪು ಎಂದು ವಾಗ್ದಾಳಿ ‌ನಡೆಸಿದರು.

ಇದನ್ನೂ ಓದಿ:ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ.. ರಾಜ್ಯದ ಪರ ಸಮರ್ಥ ವಾದ ಮಂಡನೆ: ಸಿಎಂ ಬೊಮ್ಮಾಯಿ

ನಮ್ಮ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಮೇಲಿನ ಕೆಟ್ಟ ಹೆಸರನ್ನು ವಿಷಯಾಂತರ ಮಾಡುವ ಉದ್ದೇಶದಿಂದ ಸಮಸ್ಯೆ ದೊಡ್ಡದು ಮಾಡ್ತಿದ್ದಾರೆ. ಇದು ಆಗಲೇ ನಿರ್ಧಾರವಾಗಿರುವ ವಿಚಾರ. ಅವರ ಗಡಿ ಅವರದ್ದು, ನಮ್ಮ ಗಡಿ ನಮ್ಮದು, ಇಲ್ಲಿರುವವರು ನಮ್ಮ ಜನ, ಅಲ್ಲಿರುವವರು ಅವರ ಜನ. ಭಾಷೆ ವಿಚಾರಕ್ಕೆ ಮಹಾರಾಷ್ಟ್ರದಲ್ಲಿ ಕನ್ನಡ ಶಾಲೆಗಳಿಗೆ ಪ್ರೋತ್ಸಾಹ ಕೊಡಬೇಕು. ಇಲ್ಲಿರುವ ಮರಾಠಿ ಶಾಲೆಗಳಿಗೆ ನಾವು ಪ್ರೋತ್ಸಾಹ ಕೊಡಬೇಕು ಎಂದರು.

ಇದನ್ನೂ ಓದಿ:ಗಡಿ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳದ ಸುಪ್ರೀಂ ಕೋರ್ಟ್: ಕಾನೂನು ಸಮರದಲ್ಲಿ ಯಾರಿಗೆ ಜಯ?

ಗಡಿ ವಿವಾದದಿಂದಾಗಿ ಅಕ್ಕಪಕ್ಕದ ವ್ಯಾಪಾರ, ವಹಿವಾಟಿಗೆ ತೊಂದರೆಯಾಗಬಾರದು. ಸುವರ್ಣಸೌಧವನ್ನು ಕೂಡ ಬೆಳಗಾವಿಯಲ್ಲಿ ಕಟ್ಟಿದ್ದೇವೆ. ನಮ್ಮ ಶಾಂತಿಭಂಗ ಮಾಡುವ ಕೆಲಸ ಆಗಬಾರದು ಎಂದು ತಿಳಿಸಿದರು.

ABOUT THE AUTHOR

...view details