ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಇದರಲ್ಲಿ ಕೆಲವು ಆಂತರಿಕ ವಿಚಾರಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜೊತೆ ಈ ಬಗ್ಗೆ ಮಾತಾಡ್ತೇನೆ. ನಾಳೆ ಬೆಳಗಾವಿಗೂ ಹೋಗುತ್ತಿದ್ದೇನೆ. ಸತೀಶ್ ಜೊತೆ ಮಾತನಾಡಿ ಅಲ್ಲಿಯ ಸಮಸ್ಯೆ ಬಗೆಹರಿಸುತ್ತೇವೆ ಎಂದರು.
ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ಓದಿ:ಡಿಕೆಶಿ ಭೇಟಿ ಮಾಡಿ ಸಮಾಲೋಚಿಸಿದ ಶರತ್ ಬಚ್ಚೇಗೌಡ: 'ಕೈ' ಹಿಡಿತಾರಾ ಪಕ್ಷೇತರ ಶಾಸಕ?
ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಭೇಟಿ ವಿಚಾರ ಮಾತನಾಡಿ, ಶರತ್ ಬಚ್ಚೇಗೌಡ ನಮ್ಮ ಕಾರ್ಯಕರ್ತರ ಜೊತೆ ಸೇರಿ ಚುನಾವಣೆ ಮಾಡ್ತಿದ್ದಾರೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಕಾರ್ಯಕರ್ತರನ್ನು ಬೆಂಬಲಿಸುತ್ತಿದ್ದಾರೆ. ನಿನ್ನೆ ನನ್ನ ಭೇಟಿಯಾಗಿ ಈ ಬಗ್ಗೆ ಚರ್ಚಿಸಿದರು. ರಾಜಕೀಯದ ಬಗ್ಗೆ ಚರ್ಚೆ ನಡೆಸಿದ್ದೇವೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಶರತ್ ನಮ್ಮ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದರು.