ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳನ್ನು 'ನಗರ ನಕ್ಸಲರು' ಎಂದ ಪ್ರಧಾನಿ ಯುವಕರ ಕ್ಷಮೆ ಯಾಚಿಸಬೇಕು: ಡಿ.ಕೆ.ಶಿವಕುಮಾರ್ ಆಗ್ರಹ - CAA Matter

ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳನ್ನು 'ನಗರ ನಕ್ಸಲರು' ಎಂದು ಕರೆಯುವ ಮೂಲಕ ನಿಂದಿಸುವ ಕೆಲಸ ಮಾಡಿದ್ದಾರೆ. ಯುವಕರು ಇಲ್ಲದಿದ್ರೆ ನೀವು ಅಧಿಕಾರಕ್ಕೆ ಬರುತ್ತಿರಲಿಲ್ಲ. ಹಾಗಾಗಿ ಅವರು ಯುವಕರಲ್ಲಿ ಕ್ಷಮೆಯಾಚಿಸಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

bangalore
ವಿದ್ಯಾರ್ಥಿಗಳನ್ನು ನಗರ ನಕ್ಸಲರು ಎಂದ ಪ್ರಧಾನಿ ಯುವಕರಲ್ಲಿ ಕ್ಷಮೆಯಾಚಿಸಬೇಕು: ಡಿಕೆಶಿ ಆಗ್ರಹ

By

Published : Dec 24, 2019, 2:59 PM IST

ಬೆಂಗಳೂರು:ವಿದ್ಯಾರ್ಥಿಗಳನ್ನು 'ನಗರ ನಕ್ಸಲರು' ಎಂದು ಕರೆದ ಪ್ರಧಾನಿ ನರೇಂದ್ರ ಮೋದಿಯವರು ಯುವಕರಲ್ಲಿ ಕ್ಷಮೆ ಯಾಚಿಸಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ನಗರ ನಕ್ಸಲರು' ಎಂದು ಕರೆಯುವ ಮೂಲಕ ವಿದ್ಯಾರ್ಥಿಗಳನ್ನು ನಿಂದಿಸುವ ಕೆಲಸವನ್ನು ಪ್ರಧಾನಿ ಮಾಡಿದ್ದಾರೆ. ಯುವಕರು ಇಲ್ಲದಿದ್ರೆ ನೀವು ಅಧಿಕಾರಕ್ಕೆ ಬರುತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳನ್ನು ನಗರ ನಕ್ಸಲರು ಎಂದ ಪ್ರಧಾನಿ ಯುವಕರಲ್ಲಿ ಕ್ಷಮೆ ಯಾಚಿಸಬೇಕು: ಡಿಕೆಶಿ ಆಗ್ರಹ

ದೇಶದ ಹೊಸ ಕಾನೂನುಗಳನ್ನು ಎಲ್ಲಾ ದೇಶಗಳು ವಿರೋಧ ಮಾಡುತ್ತಿವೆ. ನಿಮಗೆ ಬೆಂಬಲ ನೀಡಿದ ಯುವಕರು ಮತ್ತು ಪಕ್ಷಗಳೇ ಇದೀಗ ನಿಮ್ಮ ಧೋರಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಮಂಗಳೂರಿನ ವಿಡಿಯೋ ಹಳೆಯದು. 144 ಸೆಕ್ಷನ್ ಹಾಕುವುದಕ್ಕೆ ಹೇಳಿದ್ದು ಯಾರು? ಇನ್ನೂ ಸಾಯಲಿಲ್ಲವಾ ಎಂದು ಕೇಳಿದ್ದು ಯಾರು? ಪೊಲೀಸರೇ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ ಅವರು, ಮಂಗಳೂರು ಹಾಗೂ ರಾಜ್ಯದ ಘಟನೆಗೆ ನೇರ ಜವಾಬ್ದಾರಿ ರಾಜ್ಯ ಸರ್ಕಾರ. ವಿದ್ಯಾವಂತರು ಮತ್ತು ಬುದ್ಧಿವಂತರು ಇಲ್ಲದಿದ್ದರೂ ದೇಶ ನಡೆಯುತ್ತೆ. ಆದರೆ ಪ್ರಜ್ಞಾವಂತರು ಇಲ್ಲದೇ ದೇಶ ನಡೆಸಲು ಸಾಧ್ಯವಿಲ್ಲ. ಸಾಮಾನ್ಯ ಜನರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದಿರಿ ಎಂದರು.

ABOUT THE AUTHOR

...view details