ಕರ್ನಾಟಕ

karnataka

ETV Bharat / state

ಶಾಲೆ ತೆರೆಯುವ ಸರ್ಕಾರ ತೀರ್ಮಾನಿಸಲಿ; ಡಿ.ಕೆ. ಶಿವಕುಮಾರ್

ಚುನಾವಣೆ ತಯಾರಿ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ. ಚುನಾವಣೆಯಲ್ಲಿ ಎಲ್ಲರೂ ಭಾಗವಹಿಸಿ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಅಲ್ಲದೆ ನಾಳೆ ಮಂಡ್ಯದಲ್ಲಿ ರೈತ ಸಮಾವೇಶ ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.

DK ShIvakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​

By

Published : Oct 9, 2020, 5:07 PM IST

ಬೆಂಗಳೂರು: ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿ. ಸರ್ಕಾರದ ತೀರ್ಮಾನಕ್ಕೆ ನಾನೇಕೆ ಮಧ್ಯಪ್ರವೇಶ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಶಾಲೆ ಆರಂಭದ ಬಗ್ಗೆ ಶಿಕ್ಷಕರು, ಪೋಷಕರ ಸಲಹೆ, ಅಭಿಪ್ರಾಯ ಪಡೆಯಲಿ. ಸರ್ಕಾರ ಯಾವ ತೀರ್ಮಾನ ಮಾಡುತ್ತದೆಯೋ ಮಾಡಲಿ. ನಾನೇಕೆ ಮಧ್ಯಪ್ರವೇಶ ಮಾಡಲಿ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚುನಾವಣಾ ತಯಾರಿ ಕುರಿತು ಪ್ರತಿಕ್ರಿಯಿಸಿ ಮಹಿಳಾ, ಓಬಿಸಿ ಮತ್ತು ಸೋಶಿಯಲ್ ಮೀಡಿಯಾ ಘಟಕಗಳ ಸಭೆ ಮಾಡಿದ್ದೇನೆ. ಪಕ್ಷ ಸಂಘಟನೆ ಸಲುವಾಗಿ ಸಭೆ ಮಾಡಿಸಿದ್ದೇವೆ. ಕೇಡರ್ ಬೇಸ್ ಪಾರ್ಟಿ ಕಟ್ಟುವುದಕ್ಕೆ ಒತ್ತು ಕೊಡುತ್ತಿದ್ದೇವೆ ಎಂದರು. ಎಲ್ಲರೂ ಇಲ್ಲಿ ಕಾರ್ಯಕರ್ತರು, ನಾನು ಕೂಡ ಇಲ್ಲಿ ಕಾರ್ಯಕರ್ತ. ಚುನಾವಣೆಯಲ್ಲಿ ಎಲ್ಲರೂ ಭಾಗವಹಿಸಿ ಕೆಲಸ ಮಾಡಬೇಕು ಎಂದು ಸ್ಪಷ್ಟಪಡಿಸಿದರು.

ನಾಳೆ ಮಂಡ್ಯದಲ್ಲಿ ರೈತ ಧ್ವನಿ ಕಾರ್ಯಕ್ರಮ ಮಾಡ್ತಿದ್ದೇವೆ. ಕೇಂದ್ರ ಸರ್ಕಾರ ಜಾರಿ ಮಾಡಿರುವ ರೈತ ವಿರೋಧಿ ತಿದ್ದುಪಡಿ ಕಾಯಿದೆಗಳ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದೇವೆ ಎಂದರು.

ನಾಳೆ ನಡೆಯುವ ರೈತ ಸಮಾವೇಶಕ್ಕೆ ಸುರ್ಜೇವಾಲಾ ಬರುತ್ತಿದ್ದಾರೆ. ಸಿಗ್ನೇಚರ್ ಕ್ಯಾಂಪೇನ್ ಮಾಡಿ, ಅದನ್ನು ರಾಷ್ಟ್ರಪತಿಗೆ ಕಳುಹಿಸಿಕೊಡುತ್ತೇವೆ. ಸಾಮಾಜಿಕ ಅಂತರ ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ABOUT THE AUTHOR

...view details