ಬೆಂಗಳೂರು: ಶ್ರಮಿಕ್ ವಿಶೇಷ ರೈಲಿನಲ್ಲಿ ಪ್ರಯಾಣಿಸುವ ಕಾರ್ಮಿಕರ ಸಂಚಾರ ಭತ್ಯೆ ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಶ್ರಮಿಕ್ ರೈಲಿನ ಟಿಕೆಟ್ ದರವನ್ನು ಸರ್ಕಾರವೇ ಭರಿಸಲಿದೆ: ಸಿಎಂ ಯಡಿಯೂರಪ್ಪ

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಶ್ರಮಿಕ್ ರೈಲುಗಳ ಮೂಲಕ ತಮ್ಮ ತಮ್ಮ ಊರಿಗೆ ಮರಳುತ್ತಿರುವ ವಲಸೆ ಕಾರ್ಮಿಕರ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಕ್ಕೆ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಬೇಡಿಕೆಗೆ ಸ್ಪಂದಿಸಿದಕ್ಕೆ ಡಿಕೆಶಿ ಅಭಿನಂದಿಸಿದ್ದಾರೆ.
ತಮ್ಮೂರಿಗೆ ತೆರಳುವ ಕಾರ್ಮಿಕರನ್ನು ಉಚಿತವಾಗಿ ಅವರ ತವರಿಗೆ ಕಳಿಸಿಕೊಡಬೇಕೆಂದು ನಿರಂತರವಾಗಿ ಡಿಕೆಶಿ ಆಗ್ರಹಿಸುತ್ತಾ ಬಂದಿದ್ದರು. ಈ ನಿಟ್ಟಿನಲ್ಲಿ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತೆರಳಿ ಪ್ರತಿಭಟನೆ ಕೂಡ ನಡೆಸಿದ್ದರು.
ಸಿಎಂ ಭೇಟಿ ಮಾಡಿ ಮನವಿ ಕೂಡ ಮಾಡಿಕೊಂಡಿದ್ದರು. ಕಾರ್ಮಿಕರ ಉಚಿತ ಸಂಚಾರಕ್ಕೆ ಅವಕಾಶವಾಗಲಿ ಎಂಬ ಕಾರಣಕ್ಕೆ ಸರ್ಕಾರಕ್ಕೆ ಒಂದು ಕೋಟಿ ರೂ. ನೀಡಲು ಮುಂದಾಗಿದ್ದರು. ಇದೀಗ ರಾಜ್ಯ ಸರ್ಕಾರ ಶ್ರಮಿಕ ರೈಲು ಮೂಲಕ ತೆರಳುವ ಕಾರ್ಮಿಕರ ಉಚಿತ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಕ್ಕೆ ಡಿಕೆಶಿ ಅಭಿನಂದನೆ ಸಲ್ಲಿಸಿದ್ದಾರೆ.