ಕರ್ನಾಟಕ

karnataka

ETV Bharat / state

ಪಕ್ಷದ ಚಟುವಟಿಕೆಯಲ್ಲಿ ತೊಡಗುವ ಸಲುವಾಗಿ ಕೆಪಿಸಿಸಿ ಕಚೇರಿಗೆ ತೆರಳಿದ ಡಿಕೆಶಿ - ಡಿ.ಕೆ. ಶಿವಕುಮಾರ್

ರಾಜ್ಯದ 2 ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ಹಾಗೂ 4 ವಿಧಾನಪರಿಷತ್ ಕ್ಷೇತ್ರಗಳಿಗೆ ನಡೆಯುವ ಚುನಾವಣೆ ಸಂಬಂಧ ಪಕ್ಷದ ನಾಯಕರ ಜೊತೆ ಚರ್ಚಿಸಲು ಡಿಕೆಶಿ ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ.

KPCC president DK. Shivakumar
ಕೆಪಿಸಿಸಿ ಕಚೇರಿಗೆ ತೆರಳಿದ ಡಿಕೆ ಶಿವಕುಮಾರ್​

By

Published : Oct 6, 2020, 3:14 PM IST

Updated : Oct 6, 2020, 3:34 PM IST

ಬೆಂಗಳೂರು:ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಕಚೇರಿಯತ್ತ ತೆರಳಿದ್ದಾರೆ.

ಪಕ್ಷದ ಚಟುವಟಿಕೆಯಲ್ಲಿ ತೊಡಗುವ ಸಲುವಾಗಿ ಕೆಪಿಸಿಸಿ ಕಚೇರಿಗೆ ತೆರಳಿದ ಡಿಕೆಶಿ

ಸದಾಶಿವನಗರ ನಿವಾಸದಿಂದ ಹೊರಟಿರುವ ಅವರು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಗೆ ತೆರಳಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಚೇರಿಗೆ ತೆರಳಲಿರುವ ಅವರು ಇದಕ್ಕೂ ಮುನ್ನ ಬೆಂಗಳೂರಿನಲ್ಲಿರುವ ಅಜ್ಜಯ್ಯನ ಮಠಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಲಿದ್ದಾರೆ. ಇದೀಗ ನಿವಾಸದಿಂದ ತೆರಳಿದ್ದು ನೇರವಾಗಿ ಮಠಕ್ಕೆ ಭೇಟಿ ಕೊಡಲಿದ್ದು, ಅಲ್ಲಿಂದ ಕೆಪಿಸಿಸಿ ಕಚೇರಿಯತ್ತ ಪ್ರಯಾಣಿಸುತ್ತಾರೆ. ರಾಜ್ಯದ 2 ವಿಧಾನಸಭೆ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ಹಾಗೂ 4 ವಿಧಾನಪರಿಷತ್ ಕ್ಷೇತ್ರಗಳಿಗೆ ನಡೆಯುವ ಚುನಾವಣೆ ಸಂಬಂಧ ಪಕ್ಷದ ನಾಯಕರ ಜೊತೆ ಚರ್ಚಿಸಲು ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ.

ಇಂದು ಬೆಳಿಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಜೊತೆ ದೂರವಾಣಿ ಮೂಲಕ ಚರ್ಚಿಸಿರುವ ಅವರು, ಆದಷ್ಟು ಶೀಘ್ರ ರಾಜರಾಜೇಶ್ವರಿನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಗಳ ಹೆಸರು ಪ್ರಕಟವಾಗುವ ಭರವಸೆ ಪಡೆದಿದ್ದಾರೆ.

2 ಶಿಕ್ಷಕರ ಹಾಗೂ 2 ಪದವೀಧರ ಕ್ಷೇತ್ರಗಳಿಗೆ ವಿಧಾನಪರಿಷತ್ ಚುನಾವಣೆ ಇದೇ ತಿಂಗಳಾಂತ್ಯದಲ್ಲಿ ನಡೆಯಲಿದ್ದು, ಆಗ್ನೇಯ ಪದವೀಧರ ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈಗಾಗಲೇ ಡಿಕೆಶಿ ಬಿ ಫಾರಂ ವಿತರಿಸಿದ್ದಾರೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ ಆಗಲಿರುವ ರಮೇಶ್ ಬಾಬು ಇತ್ತೀಚೆಗೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದು, ಹೈಕಮಾಂಡ್​ನಿಂದ ಒಪ್ಪಿಗೆ ಪಡೆಯಬೇಕಿದೆ.

ನಾಲ್ಕು ಪರಿಷತ್ ಕ್ಷೇತ್ರಗಳ ಚುನಾವಣೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಕೈಗೊಳ್ಳಬೇಕಾದ ಸಿದ್ಧತೆ ಹಾಗೂ ಮುಂದೆ ಘೋಷಣೆ ಆಗಬೇಕಿರುವ ಮಸ್ಕಿ ಹಾಗೂ ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಜೊತೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕೈಗೊಳ್ಳಬೇಕಾದ ಸಿದ್ಧತೆಗೆ ಡಿಕೆಶಿ ಅಣಿಯಾಗಬೇಕಿದೆ.

Last Updated : Oct 6, 2020, 3:34 PM IST

ABOUT THE AUTHOR

...view details