ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶಾಸಕ ಸತ್ಯನಾರಾಯಣ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ತುಮಕೂರು ಜಿಲ್ಲೆಯ ಶಿರಾದ ಎಪಿಎಂಸಿ ಮಾರುಕಟ್ಟೆಗೆ ಇಂದು ಮಧ್ಯಾಹ್ನ 1 ಗಂಟೆಗೆ ಭೇಟಿ ನೀಡಲಿದ್ದಾರೆ.
ಕಲಬುರಗಿ ಪ್ರವಾಸದಲ್ಲಿದ್ದ ಶಿವಕುಮಾರ್, ಕಲಬುರಗಿಯಿಂದ ಹೈದರಾಬಾದ್ ಮಾರ್ಗವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ನೇರವಾಗಿ ಶಿರಾಕ್ಕೆ ತೆರಳುತ್ತಾರೆ.