ಕರ್ನಾಟಕ

karnataka

ETV Bharat / state

ವಿಶೇಷ ಅಧಿವೇಶನ ಕರೆಯುವಂತೆ ಸಿಎಂಗೆ ಡಿಕೆಶಿ ಮನವಿ - ವಿಶೇಷ ಅಧಿವೇಶನ

ಸದ್ಯದ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಎಂದು ಡಿ.ಕೆ. ಶಿವಕುಮಾರ್​ ಬಿ.ಎಸ್​​. ಯಡಿಯೂರಪ್ಪನವರಿಗೆ ಆಗ್ರಹಿಸಿದ್ದಾರೆ.

dk shivkumar video messege
ವಿಶೇಷ ಅಧಿವೇಶನ ಕರೆಯುವಂತೆ ಸಿಎಂಗೆ ಡಿಕೆಶಿ ಮನವಿ

By

Published : May 6, 2020, 12:20 PM IST

ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡಲೇ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ವಿಶೇಷ ಅಧಿವೇಶನ ಕರೆಯುವಂತೆ ಸಿಎಂಗೆ ಡಿಕೆಶಿ ಮನವಿ

ಈ ಸಂಬಂಧ ಟ್ವೀಟ್ ಹಾಗೂ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಅವರು, ನಾನು ಸಿಎಂ ಯಡಿಯೂರಪ್ಪ ಅವರನ್ನು ಆಗ್ರಹಿಸುವುದೇನೆಂದರೆ, ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು ಎಂದಿದ್ದಾರೆ.

ವಿಶೇಷ ಅಧಿವೇಶನ ಕರೆಯುವಂತೆ ಸಿಎಂಗೆ ಡಿಕೆಶಿ ಮನವಿ

ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ ಅಗತ್ಯವಿದೆ. ಹೀಗಾಗಿ ಈ ಅಧಿವೇಶನ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ. ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಹೇಳಿದ್ದಾರೆ.

ABOUT THE AUTHOR

...view details