ಕರ್ನಾಟಕ

karnataka

ETV Bharat / state

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಸಿಎಂಗೆ ಡಿಕೆಶಿ ಪತ್ರ - Dk shivkumar news

ಪ್ರಸ್ತುತ ಕೋವಿಡ್- 19 ಪಿಡುಗು ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಪಾರವಾದದ್ದು, ತಮ್ಮ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಅವರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಬಿ.ಎಸ್. ಯಡಿಯೂರಪ್ಪನವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

Dk shivkumar
Dk shivkumar

By

Published : Jul 22, 2020, 3:15 PM IST

ಬೆಂಗಳೂರು: ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ಸಿಎಂ ಗೆ ಡಿ.ಕೆ ಶಿವಕುಮಾರ್ ಪತ್ರ

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಪ್ರಸ್ತುತ ಕೋವಿಡ್- 19 ಪಿಡುಗು ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸೇವೆ ಅಪಾರವಾದದ್ದು, ತಮ್ಮ ಜೀವ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನಿರ್ಲಕ್ಷಿಸುವುದು ನೋವಿನ ಸಂಗತಿ. ವೇತನ ಹೆಚ್ಚಳ, ಬರಬೇಕಾಗಿರುವ ಬಾಕಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ಕಳೆದ ಎರಡು ವಾರಗಳಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದರು.

ಆಶಾ ಕಾರ್ಯಕರ್ತೆಯರ ಕಷ್ಟ, ನೋವು ಕೇಳಲು ನೀವಾಗಲಿ, ನಮ್ಮ ಸಚಿವರಾಗಲಿ ಯಾರೂ ಅವರ ಬಳಿ ಹೋಗಿಲ್ಲ. ಆಶಾ ಕಾರ್ಯಕರ್ತೆ ಪ್ರತಿನಿಧಿಗಳು ಹಲವು ಬಾರಿ ನನ್ನನ್ನು ಸಂಪರ್ಕ ಮಾಡಿ, ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ನಾನೂ ಕೂಡ ಪ್ರತಿಭಟನಾನಿರತ ಸ್ಥಳಕ್ಕೆ ತೆರಳಿ ಅವರ ಅಹವಾಲು ಆಲಿಸಿದ್ದೇನೆ. ಆದರೆ ಸರ್ಕಾರ ಅವರ ಕಡೆ ತಿರುಗಿಯೂ ನೋಡದಿರುವುದು ವಿಷಾದದ ಸಂಗತಿ ಎಂದು ತಿಳಿಸಿದ್ದಾರೆ.

ಅವರು ಕಳೆದ 12 ವರ್ಷಗಳಿಂದ ಕೆಲಸ ಮಾಡುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟು 6 ಸಾವಿರ ಪ್ರೋತ್ಸಾಹಧನ ಸಿಗುತ್ತಿದೆ. ಇದು ಈಗಿನ ಪರಿಸ್ಥಿತಿಯಲ್ಲಿ ಯಾವುದಕ್ಕೂ ಸಾಲುವುದಿಲ್ಲ. ಅಲ್ಲದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಹಣ ಒಟ್ಟಿಗೆ ಬರುತ್ತಿಲ್ಲ ಎಂದಿದ್ದಾರೆ. ಹೀಗಾಗಿ ಇವರಿಗೆ ಮಾಸಿಕ 12 ಸಾವಿರ ರೂಪಾಯಿ ವೇತನ ನಿಗದಿ ಮಾಡಬೇಕು. ಸರ್ಕಾರದಿಂದ ಬರಬೇಕಿರುವ ಬಾಕಿ ಹಣವನ್ನು ತಕ್ಷಣ ನೀಡಬೇಕು. ನೀವು ಘೋಷಣೆ ಮಾಡಿದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಕೂಡ ಶೇ.10 ರಷ್ಟು ಮಂದಿ ಸೇರಿಲ್ಲ, ಅದನ್ನು ಶೀಘ್ರವೇ ತಲುಪಿಸಬೇಕು. ಆಶಾ ಕಾರ್ಯಕರ್ತೆಯರಿಗೆ ಸುರಕ್ಷತಾ ಸಾಧನಗಳನ್ನು ನೀಡಬೇಕು ಮತ್ತು ಆರೋಗ್ಯ ವಿಮೆ ಮಾಡಿಸಬೇಕು. ಎಲ್ಲಕ್ಕಿಂತ ಮಿಗಿಲಾಗಿ ನೀವು ಸಂಘಟನಾ ಪ್ರತಿನಿಧಿಗಳನ್ನು ಕರೆದು ಅವರ ಅಹವಾಲು ಕೇಳಬೇಕು ಹಾಗೂ ಅದಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details