ಬೆಂಗಳೂರು: ರಸ್ತೆ ಅಪಘಾತದಲ್ಲಿ ನಿಧನರಾದ ಖಾಸಗಿ ವಾಹಿನಿ ವರದಿಗಾರ ಹನುಮಂತು ಕುಟುಂಬಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಲಾ 5 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.
ಹನುಮಂತು ಅಂತಿಮ ದರ್ಶನ ಪಡೆದ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್, ಹನುಮಂತು ಕುಟುಂಬಕ್ಕೆ ಡಿಕೆಶಿಎಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 5 ಲಕ್ಷ ರೂಪಾಯಿ ನೆರವು ನೀಡುವುದಾಗಿ ಭರವಸೆ ನೀಡಿ ಬಂದಿದ್ದರು. ಇದೀಗ ಟ್ರಸ್ಟ್ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ 5 ಲಕ್ಷ ರೂ. ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.