ಕರ್ನಾಟಕ

karnataka

ETV Bharat / state

ನಾಳೆಯಿಂದ ಲಾಕ್​ ಡೌನ್​ ಸಡಿಲಿಕೆ: ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಡಿಕೆಶಿ ಮನವಿ - DKS statement on lock down relaxation

ನಾಳೆಯಿಂದ ಲಾಕ್ ಡೌನ್​ ಸಡಿಲಿಕೆಯಾಗಲಿದ್ದು, ಧಾರ್ಮಿಕ ಕೇಂದ್ರಗಳು, ಹೋಟೆಲ್, ಮಾಲ್​ಗಳು ತೆರೆಯಲಿವೆ. ಹಾಗಾಗಿ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಎಚ್ಚರಿಕೆಯಿಂದ ಇರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಮನವಿ ಮಾಡಿದ್ದಾರೆ.

DKS appeals to follow the government guidelines
ಡಿ.ಕೆ ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ

By

Published : Jun 7, 2020, 12:49 PM IST

ಬೆಂಗಳೂರು: ನಾಳೆಯಿಂದ ಲಾಕ್ ಡೌನ್ ಸಡಿಲಿಕೆಯಾಗಲಿದ್ದು, ರಾಜ್ಯದ ಜನತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ರೇಸ್​​​ ಕೋರ್ಸ್​ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಜನರು ಬಹಳ ಎಚ್ಚರಿಕೆಯಿಂದ ಇರಬೇಕು, ಯಾರೂ ಅಲಕ್ಷ್ಯ ತೋರಿಸುವುದು ಬೇಡ. ಹೋಟೆಲ್, ಮಾಲ್, ದೇಗುಲಗಳನ್ನು ತೆರೆಯಲಾಗುತ್ತಿದೆ. ಹೀಗಾಗಿ ಇನ್ನು ಮುಂದೆ ಮತ್ತಷ್ಟು ಜಾಗರೂಕರಾಗಬೇಕು. ನಾವೆಲ್ಲರೂ ಒಟ್ಟಾಗಿ ನಿಯಮಗಳನ್ನು ಪಾಲಿಸಬೇಕು. ನನ್ನ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಕೂಡ ವ್ಯವಸ್ಥಿತವಾಗಿ ನೆರವೇರಿಸಲಾಗುವುದು ಎಂದರು.

ಡಿ.ಕೆ ಶಿವಕುಮಾರ್​, ಕೆಪಿಸಿಸಿ ಅಧ್ಯಕ್ಷ

ಜೂನ್ 14 ರಂದು ಪದಗ್ರಹಣ ಕಾರ್ಯಕ್ರಮ ನಡೆಸಲು ಸಿಎಂ ಬಳಿ ಅನುಮತಿ ಕೇಳಿದ್ದೇನೆ. ಅನುಮತಿ ಕೊಟ್ಟರೆ ಸರಳವಾಗಿ ಕಾರ್ಯಕ್ರಮ ನಡೆಸುತ್ತೇವೆ. ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಮಾಡಲ್ಲ, ಕೇವಲ 150 ಮಂದಿ ಸೇರಿ ಕಾರ್ಯಕ್ರಮ ಮಾಡ್ತೇವೆ. ಉಳಿದಂತೆ ಗ್ರಾಮ ಪಂಚಾಯತ್​ ಮಟ್ಟದಲ್ಲೇ ಕಾರ್ಯಕ್ರಮಗಳು ನಡೆಯಲಿವೆ. ಆದ್ದರಿಂದ ಕಾರ್ಯಕರ್ತರು ಯಾರು ಇಲ್ಲಿಗೆ ಬರಬಾರದು, ಕೇವಲ ಶಾಸಕರು, ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ. ಅವರಿಗೆ ಪಾಸ್ ವ್ಯವಸ್ಥೆ ಮಾಡ್ತೇವೆ ಎಂದರು.

ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ ಬಗ್ಗೆ ಮಾತನಾಡಿ, ನಾವು ಕಾರ್ಯಕರ್ತರು ಬರದಂತೆ ಮನವಿ ಮಾಡಿದ್ದೇವೆ. ಬಂದರೂ ವಿಧಾನಸೌಧದಲ್ಲಿ ಅವಕಾಶವಿಲ್ಲ. ಮೊದಲು ನಮ್ಮ ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆ ಇದೆ. ಸಭೆಯ ಬಳಿಕ ನಾಮಪತ್ರ ಸಲ್ಲಿಸುತ್ತೇವೆ. ಕೆಲವು ನಾಯಕರು ಮಾತ್ರ ಭಾಗವಹಿಸುತ್ತೇವೆ. ಫಲಿತಾಂಶ ಬಂದ ನಂತರ ಎಲ್ಲರೂ ಸಂಭ್ರಮಾಚರಣೆ ಮಾಡೋಣ ಎಂದರು.

ಮಾಜಿ ಪ್ರಧಾನಿ ದೇವೇಗೌಡರಿಗೆ ಬೆಂಬಲ ನೀಡುವ ಕುರಿತು ಪ್ರತಿಕ್ರಿಯಿಸಿ, ನಮ್ಮ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಯವರು ಮಾತ್ರ. ಜೆಡಿಎಸ್​ಗೆ ಬೆಂಬಲ ನೀಡುವ ಬಗ್ಗೆ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ. ನಾವು ಬಿಜೆಪಿಯನ್ನು ಬೆಂಬಲಿಸೋಕೆ ಆಗುತ್ತಾ? ಜಾತ್ಯಾತೀತ ನಿಲುವನ್ನೇ ಬೆಂಬಲಿಸಬೇಕು ಎಂದು ಪರೋಕ್ಷವಾಗಿ ಜೆಡಿಎಸ್​ ಪರ ಮಾತನಾಡಿದರು.

For All Latest Updates

TAGGED:

ABOUT THE AUTHOR

...view details