ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಮಹಾನಗರ ವ್ಯಾಪ್ತಿಯ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಮೇಯರ್ಗಳ ಸಭೆ ಕರೆದಿದ್ದಾರೆ.
ಬೆಂಗಳೂರು ಕಾಂಗ್ರೆಸ್ ಶಾಸಕರು, ಮಾಜಿ ಮೇಯರ್ಗಳ ಸಭೆ ಕರೆದ ಡಿಕೆಶಿ - ಬೆಂಗಳೂರು ಕಾಂಗ್ರೆಸ್ ಶಾಸಕರು, ಮಾಜಿ ಮೇಯರ್ಗಳ ಸಭೆ
ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಬೆಂಗಳೂರು ಕಾಂಗ್ರೆಸ್ ಶಾಸಕರು, ಮಾಜಿ ಮೇಯರ್ಗಳ ಸಭೆ ನಡೆಯಲಿದ್ದು, ನಗರದಲ್ಲಿ ನಿನ್ನೆ ತಡರಾತ್ರಿ ನಡೆದ ಗಲಭೆಯ ಕುರಿತು ಕಾಂಗ್ರೆಸ್ ಪಕ್ಷ ಕೈಗೊಳ್ಳಬಹುದಾದ ನಡೆಯ ಕುರಿತು ಡಿ.ಕೆ.ಶಿವಕುಮಾರ್ ಚರ್ಚಿಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಲಿದ್ದು, ನಗರದಲ್ಲಿ ನಿನ್ನೆ ತಡರಾತ್ರಿ ನಡೆದ ಗಲಭೆಯ ಕುರಿತು ಕಾಂಗ್ರೆಸ್ ಪಕ್ಷ ಕೈಗೊಳ್ಳಬಹುದಾದ ನಡೆಯ ಕುರಿತು ಚರ್ಚಿಸಲಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಂದರ್ಭ ಡಿ.ಕೆ.ಶಿವಕುಮಾರ್ ವಿವರ ನೀಡಿದ್ದು, ಡಿ.ಜೆ ಹಳ್ಳಿ ಗಲಭೆ ಹಾಗೂ ತಡರಾತ್ರಿ ನಡೆದ ಘಟನೆಯನ್ನ ಖಂಡಿಸುತ್ತೇನೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ. ಅದು ಕೂಡ ತಪ್ಪು. ಬೆಂಗಳೂರು ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡ್ತೇವೆ. ಘಟನೆಯ ಹಿಂದೆ ವ್ಯವಸ್ಥಿತವಾದ ಸಂಚು ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಆರ್ಎಸ್ಎಸ್ ಮುಖಂಡ ಬಿ.ಎಲ್.ಸಂತೋಷ ಏನ್ ರಾಜಕಾರಣ ಮಾಡ್ತಾರೆ ಮಾಡಲಿ. ರಾತ್ರಿಯಿಂದ ನಾನು ಮಾಹಿತಿ ಪಡೆದಿದ್ದೇನೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲೆಸುವಂತೆ ಪ್ರಯತ್ನ ಮಾಡಿದ್ದಾರೆ. ಸಿ.ಟಿ.ರವಿ ಅಥವಾ ಇನ್ಯಾರದ್ದೋ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.