ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಂಟೋನ್ಮೆಂಟ್ ಸಮೀಪವಿರುವ ಶಾಸಕ ಜಮೀರ್ ಅಹಮದ್ ಖಾನ್ ಅವರ ನಿವಾಸಕ್ಕೆ ತೆರಳಿ ಸಮಾಲೋಚನೆ ನಡೆಸಿದರು. ಆ.6 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಮೀರ್ ಅಹಮದ್ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು.
ಅಕ್ರಮ ಆಸ್ತಿ ಸಂಪಾದನೆ ಹಿನ್ನೆಲೆ ಇವರ ಮೇಲೆ ದಾಳಿ ನಡೆದಿದ್ದು, ಒಂದು ದಿನ ಸುದೀರ್ಘ ವಿಚಾರಣೆ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ಅಧಿಕಾರಿಗಳು ದಿಲ್ಲಿಗೆ ತೆರಳಿದ್ದರು. ಇದಾದ ಬಳಿಕ ಆ.7ರಂದು ದಿಲ್ಲಿಗೆ ಬಂದು ವಿಚಾರಣೆ ಎದುರಿಸುವಂತೆ ಜಮೀರ್ಗೆ ಇಡಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದರು.
ಎಂಟರಂದು ದಿಲ್ಲಿಗೆ ತೆರಳಿದ್ದ ಜಮೀರ್ ಅಹಮದ್, ಇಂದು ನಗರಕ್ಕೆ ವಾಪಸ್ ಆಗಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾಹಿತಿ ಪಡೆದಿದ್ದಾರೆ. ಇವರು ನೀಡಿದ ಮಾಹಿತಿಯನ್ನು ಪಕ್ಷದ ಹೈಕಮಾಂಡ್ ನಾಯಕರಿಗೂ ಶಿವಕುಮಾರ್ ತಿಳಿಸಲಿದ್ದಾರೆ.