ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹಾಗೂ ಅವರ ಧರ್ಮಪತ್ನಿ ಉಷಾ ಶಿವಕುಮಾರ್ ಅವರು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಗೋಪೂಜೆ ನೆರವೇರಿಸಿದರು.
ಪ್ರತಿವರ್ಷ ಅದ್ಧೂರಿಯಾಗಿ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದ ಡಿಕೆಶಿ, ಈ ಬಾರಿ ಕೊರೊನಾ ನಿಯಮಾವಳಿ ಜಾರಿಯಲ್ಲಿರುವ ಹಿನ್ನೆಲೆ ಕುಟುಂಬ ಸದಸ್ಯರ ಜೊತೆಗೆ ಅತ್ಯಂತ ಸರಳವಾಗಿ ಹಬ್ಬವನ್ನು ಆಚರಿಸಿದರು. ಪ್ರತಿವರ್ಷ ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಹಬ್ಬವನ್ನು ಆಚರಿಸುತ್ತಾ ಬಂದಿರುವ ಅವರು, ಇದೇ ಮೊದಲ ಬಾರಿಗೆ ಇಷ್ಟೊಂದು ಸರಳವಾಗಿ ಸಂಕ್ರಾಂತಿ ಆಚರಣೆ ಮಾಡಿದ್ದಾರೆ.