ಬೆಂಗಳೂರು: ಸಚಿವ ಡಿ.ಕೆ.ಶಿವಕುಮಾರ್ಗೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಪ್ರಕರಣ ರದ್ದು ಮಾಡುವಂತೆ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮತ್ತೆ ಅರ್ಜಿ ಸಲ್ಲಿಸಿದ ಡಿಕೆಶಿ - 1 KN_BNG_11_15_ Dk shivkumar _Story_7204498_Bhavya.txt
ಸಚಿವ ಡಿ.ಕೆ. ಶಿವಕುಮಾರ್ ಇಡಿ ಸಮನ್ಸ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಸದ್ಯ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಂಪೂರ್ಣ ಪ್ರಕರಣ ರದ್ದು ಮಾಡುವಂತೆ ಇವತ್ತು ಮತ್ತೊಂದು ಅರ್ಜಿ ಹಾಕಿದ್ದಾರೆ. ಇನ್ನು ನ್ಯಾಯಲಯ ಅರ್ಜಿ ವಿಚಾರಣೆ ನಡೆಸಿ ಅರ್ಜಿಯನ್ನ ಮಾರ್ಚ್ 25ಕ್ಕೆ ಮುಂದೂಡಿಕೆ ಮಾಡಿದೆ. ಮತ್ತೊಂದೆಡೆ ಇಡಿಯ ಇಸಿಐಆರ್ ಮತ್ತು ವಿಚಾರಣೆಗೆ ಹಾಜರಾಗುವ ಸಮನ್ಸ್ ವಿಚಾರ ಹೈಕೋರ್ಟ್ನಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಐಟಿ ದಾಳಿ ಮಾಡಿ ನಂತರ ಇಡಿಗೆ ಮಾಹಿತಿ ರವಾನೆ ಮಾಡಿತ್ತು. ಹವಾಲ ದಂಧೆ ಡಿಕೆಶಿ ಮತ್ತು ಆಪ್ತರು ನಡೆಸುತ್ತಿದ್ದಾರೆ ಎಂದು ಐಟಿ ಆರೋಪಿಸಿತ್ತು. ಈ ಹಿನ್ನೆಲೆ ಇಡಿ ಪ್ರಕರಣ ದಾಖಲಿಸಿ ಡಿಕೆಶಿ ಹಾಗೂ ಆಪ್ತರಿಗೆ ಸಮನ್ಸ್ ನೀಡಿದ್ರಿಂದ ಪ್ರಕರಣಕ್ಕೆ ಬ್ರೇಕ್ ಹಾಕಲು ಡಿಕೆಶಿ ಹಾಗೂ ಅವರ ಆಪ್ತರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ರು. ಇದೀಗ ಮತ್ತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.