ಕರ್ನಾಟಕ

karnataka

ಡಿಕೆಶಿ ಆರೋಗ್ಯಕ್ಕೆ ಪ್ರಾರ್ಥನೆ: ದೇವಾಲಯದಲ್ಲಿ ಮುಂದುವರಿದ ಈಡುಗಾಯಿ ಸೇವೆ

By

Published : Aug 28, 2020, 10:29 PM IST

ಡಿ.ಕೆ. ಶಿವಕುಮಾರ್ ಕೊರೊನಾದಿಂದ ಆದಷ್ಟು ಬೇಗ ಗುಣಮುಖರಾಗಲೆಂದು ಅವರ ಅಭಿಮಾನಿಗಳು, ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ 501 ತೆಂಗಿನಕಾಯಿ ಒಡೆಯುವ ಮೂಲಕ ಈಡುಗಾಯಿ ಸೇವೆ ಸಲ್ಲಿಸಿದರು.

ದೇವಾಲಯದಲ್ಲಿ ಮುಂದುವರಿದ ಈಡುಗಾಯಿ ಸೇವೆ
ದೇವಾಲಯದಲ್ಲಿ ಮುಂದುವರಿದ ಈಡುಗಾಯಿ ಸೇವೆ

ಬೆಂಗಳೂರು: ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶೀಘ್ರ ಗುಣಮುಖರಾಗಲೆಂದು ಅವರ ಅಭಿಮಾನಿಗಳು ಈಡುಗಾಯಿ ಸೇವೆ ಸಲ್ಲಿಸಿದರು.

ಆ.24 ರಂದು ಡಿ.ಕೆ. ಶಿವಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಕಳೆದ ಮೂರು ದಿನಗಳಿಂದ ನಗರದ ವಿವಿಧ ದೇವಾಲಯಗಳಿಗೆ ತೆರಳಿ ಶಿವಕುಮಾರ್ ಹೆಸರಿನಲ್ಲಿ ಪೂಜೆ ಮಾಡಿಸಿ, ಈಡುಗಾಯಿ ಸೇವೆ ಸಲ್ಲಿಸುತ್ತಿದೆ. ಇಂದು ಬೆಂಗಳೂರಿನ ಶ್ರೀ ಬನಶಂಕರಿ ದೇವಸ್ಥಾನದಲ್ಲಿ 501 ತೆಂಗಿನಕಾಯಿ ಒಡೆಯುವ ಮೂಲಕ ಡಿಕೆಶಿ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಲಾಯಿತು.

ದೇವಾಲಯದಲ್ಲಿ ಮುಂದುವರಿದ ಈಡುಗಾಯಿ ಸೇವೆ

ಬೆಂಗಳೂರಿನ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಚೇತರಿಕೆ ಕಂಡಿದ್ದಾರೆ. ಆಸ್ಪತ್ರೆಯಿಂದಲೇ ಪಕ್ಷದ ನಾಯಕರ ಜೊತೆ ಆನ್ಲೈನ್ ಮೂಲಕ ಸಂಪರ್ಕ ಸಾಧಿಸಿ ಚರ್ಚಿಸುತ್ತಿದ್ದಾರೆ. ಇನ್ನೊಂದು ವಾರದಲ್ಲಿ ಅವರು ಸಂಪೂರ್ಣ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದುವ ವಿಶ್ವಾಸ ಇದೆ.

ABOUT THE AUTHOR

...view details