ಬೆಂಗಳೂರು: ಕೋವಿಡ್-19 ವಿರುದ್ಧದ ಹೋರಾಟದ ನಡುವೆ ಕೆಲಸ ಮಾಡುತ್ತಿರುವ ಪ್ರತಿಯೊಬ್ಬ ಪತ್ರಕರ್ತರೂ ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಪತ್ರಕರ್ತರಿಗೆ ಸಿಎಂ ಬಿಎಸ್ವೈ ಮನವಿ - bangalore latest news
ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ಪೊಲೀಸರಂತೆ ಪತ್ರಕರ್ತರೂ ಸಹ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಕರ್ತವ್ಯದ ವೇಳೆ ಗಡಿಬಿಡಿಯಲ್ಲಿ ಆರೋಗ್ಯದ ಬಗ್ಗೆ ಎಚ್ಚರ ತಪ್ಪಬೇಡಿ. ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಪತ್ರಕರ್ತರೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಸಿಎಂ ಬಿಎಸ್ವೈ ಮನವಿ
ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಕೊರೊನಾ ವಿರುದ್ಧದ ಹೋರಾಟದಲ್ಲಿ ವೈದ್ಯರು, ಪೊಲೀಸರಂತೆ ಪತ್ರಕರ್ತರೂ ಸಹ ಜೀವದ ಹಂಗು ತೊರೆದು ದಿನದ 24 ಗಂಟೆ ಜನತೆ ಹಾಗೂ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದಾರೆ. ಕರ್ತವ್ಯದ ವೇಳೆ ಗಡಿಬಿಡಿಯಲ್ಲಿ ಆರೋಗ್ಯದ ಬಗ್ಗೆ ಎಚ್ಚರ ತಪ್ಪಬಾರದೆಂಬ ಕಾಳಜಿ ನಮಗಿದೆ. ಹಾಗಾಗಿ ಆರೋಗ್ಯ ತಪಾಸಣೆಗೊಳಗಾಗಿ ಎಚ್ಚರ ವಹಿಸಿ ಎಂದು ವಿನಂತಿ ಮಾಡಿಕೊಂಡಿದ್ದಾರೆ. ಇನ್ನು ನಿನ್ನೆಷ್ಟೇ ಮಹಾರಾಷ್ಟ್ರದಲ್ಲಿ 58 ಮಂದಿ ಪತ್ರಕರ್ತರಲ್ಲಿ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.