ಬೆಂಗಳೂರು:ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮುಂದಿನ ಆದೇಶದವರೆಗೆ, ಸದ್ಯ ಇರುವ ಸ್ಥಳದಲ್ಲಿಯೇ ಕಾರ್ಯನಿರ್ವಹಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.
ಮುಂದಿನ ಆದೇಶದ ತನಕ ಈಗ ಇರುವಲ್ಲೇ ಕೆಲಸ ನಿರ್ವಹಿಸಿ: ಶಿಕ್ಷಕರಿಗೆ ಸಚಿವರ ಸೂಚನೆ - minister suresh kumar
ನೂತನ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಬೇಕಾಗಿದೆ. ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮುಂದಿನ ಆದೇಶದವರೆಗೆ ಈಗ ಇರುವ ಸ್ಥಳದಲ್ಲೇ ಕಾರ್ಯನಿರ್ವಹಿಸುವಂತೆ ಶಿಕ್ಷಣ ಸಚಿವರು ಸೂಚಿಸಿದ್ದಾರೆ.
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
ನೂತನ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಬೇಕಾಗಿದೆ. ಪ್ರಸ್ತುತ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಹಾಗೆಯೇ ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದಿರುವ ಶಿಕ್ಷಕರನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ಮುಂದುವರೆಸಲು ಸೂಚಿಸಲಾಗಿದೆ.