ಬೆಂಗಳೂರು:ಇಸ್ರೋ ಅಧ್ಯಕ್ಷ ಹಾಗೂ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರತಿಷ್ಠಿತ ‘ಡಾಕ್ಟರ್ ಆಫ್ ಸೈನ್ಸ್ʼ ಗೌರವ ಪದವಿಗೆ ಪಾತ್ರರಾಗಿದ್ದಾರೆ. ಅತ್ಯುತ್ತಮ ವಿಜ್ಞಾನಿಗಳು ಹಾಗೂ ಕೈಗಾರಿಕೋದ್ಯಮಿಗಳನ್ನು ಗುರುತಿಸಿ ಈ ಪದವಿ ನೀಡಲಾಗುತ್ತದೆ.
ರಾಜಭವನದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯ್ ವಾಲ ಅವರು ಶಿವನ್ ಅವರಿಗೆ ಈ ಗೌರವ ಪದವಿಯನ್ನು ಪ್ರದಾನ ಮಾಡಿದರಲ್ಲದೆ, ಇಸ್ರೋ ಅಧ್ಯಕ್ಷರಾಗಿ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದರು.