ಬೆಂಗಳೂರು:ಕೊರೊನಾ ಸೋಂಕು ಎಲ್ಲರನ್ನೂ ಕಾಡುತ್ತಿದೆ. ಬೆಂಗಳೂರಿನಲ್ಲಿಯೂ ಕೂಡಾ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ಪೊಲೀಸರಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ಸೋಂಕು ಈಗ ವೈದ್ಯರಿಗೂ ಕಾಡುತ್ತಿದೆ.
ಕಂಟ್ರೋಲ್ ತಪ್ಪಿದ ಕೊರೊನಾ: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೂ ಸೋಂಕು - ಬೆಂಗಳೂರಿನಲ್ಲಿ ಕೊರೊನಾ
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ದಿನೇ ದಿನೆ ಹೆಚ್ಚಳವಾಗುತ್ತಿದೆ. ನಗರದ ಯಲಹಂಕದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊಬ್ಬರಿಗೆ ಸೋಂಕು ತಗುಲಿದೆ.

ಕೊರೊನಾ
ನಗರದ ಯಲಹಂಕ ಬಳೀಯ ಅಟ್ಟೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ವೈದ್ಯರ ಸಂಪರ್ಕಕ್ಕೆ ಬಂದಿದ್ದ ರೋಗಿಗಳಿಗೆ, ನರ್ಸ್ಗಳಿಗೆ ಹಾಗೂ ಆಸ್ಪತ್ರೆಯ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.