ಬೆಂಗಳೂರು :ಹಿಂದಿ ನಮ್ಮ ರಾಷ್ಟ್ರ ಭಾಷೆ, ಕನ್ನಡಿಗರಾದ ನಾವು ಅದನ್ನು ಒಪ್ಪಿಕೊಳ್ಳಬೇಕು ಎಂದಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡರ ಮಾತು ಕೇಳಿ ಅಚ್ಚರಿಯಾಯಿತು. ಬಹುಶಃ ಇದು ಅವರ ಅರಿವಿನ ಕೊರತೆಯಾಗಿರಬಹುದು ಎಂದು ಜೆಡಿಎಸ್ನ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಹಿಂದಿ ರಾಷ್ಟ್ರ ಭಾಷೆಯಲ್ಲ.. ದೊಡ್ಡರಂಗೇಗೌಡರಿಗೆ ಅರಿವಿಲ್ಲ; ನಿಖಿಲ್ ಕುಮಾರಸ್ವಾಮಿ - ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಿಗೆ ಅರಿವಿನ ಕೊರತೆ ಇದೆ
ನಮ್ಮ ರಾಜ್ಯದ ಪ್ರತಿ ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ..
ಸಂಗ್ರಹ ಚಿತ್ರ
ಈ ಕುರಿತು ಟ್ವೀಟ್ ಮಾಡಿರುವ ಅವರು, ನಮ್ಮ ರಾಜ್ಯದ ಪ್ರತಿ ಶಾಲೆಯಲ್ಲೂ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ವಿಚಾರವನ್ನು ಕಲಿಸುವ ಅವಶ್ಯಕತೆ ಇದೆ. ಇಲ್ಲದಿದ್ದರೆ ಮುಂದಿನ ಪೀಳಿಗೆಯೂ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರ ರೀತಿ ಹಿಂದಿ ರಾಷ್ಟ್ರೀಯ ಭಾಷೆ ಎಂದು ತಪ್ಪಾಗಿ ಭಾವಿಸಿಕೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.