ದೊಡ್ಡಬಳ್ಳಾಪುರ:ಮಧ್ಯರಾತ್ರಿ ಜನರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಮಧ್ಯರಾತ್ರಿ ಜನರನ್ನು ಅಡ್ಡಗಟ್ಟಿ ರಾಬರಿ ಮಾಡುತ್ತಿದ್ದ ಗ್ಯಾಂಗ್ ಅಂದರ್ ಎಂಟು ಜನರಿದ್ದ ಈ ಗ್ಯಾಂಗ್ ಬೆಂಗಳೂರು ನಗರದ ಸುತ್ತಮುತ್ತ ಮಧ್ಯರಾತ್ರಿ ರಸ್ತೆಯಲ್ಲಿ ತೆರಳುವ ಜನರನ್ನು ಅಡ್ಡಗಟ್ಟಿ ಅವರ ಬಳಿಯಿದ್ದ ಹಣವನ್ನು ದೋಚುತ್ತಿತ್ತು. ಈ ಕಳ್ಳರ ಗುಂಪು ಬಾರ್ ಕ್ಯಾಷಿಯರ್ಗಳನ್ನು ಟಾರ್ಗೆಟ್ ಮಾಡುತ್ತಿತ್ತು.
ನ.01.2020ರಂದು ರಾಜಾನುಕುಂಟೆಯ ರಚನಾ ಬಾರ್ ಕ್ಯಾಷಿಯರ್ ಗಿರೀಶ್ ಎಂಬುವವರು ಬಾರ್ ಬಾಗಿಲು ಹಾಕಿ ಕ್ಯಾಶ್ ತೆಗೆದುಕೊಂಡು ಮನೆಗೆ ತೆರಳುತ್ತಿದ್ದರು. ಯಲಹಂಕ-ದೊಡ್ಡಬಳ್ಳಾಪುರ ರಸ್ತೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಎರಡು ಬೈಕ್ಗಳಲ್ಲಿ ನಾಲ್ವರು ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಬಂದು ಹೊನ್ನೆನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಗಿರೀಶ್ ಅವರನ್ನು ಅಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ 2.20 ಲಕ್ಷ ಹಣ ದೋಚಿ ಪರಾರಿಯಾಗಿದ್ದರು. ಹಲ್ಲೆ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಓದಿ: ತುಮಕೂರು : ಎಟಿಎಂ ಯಂತ್ರವನ್ನೇ ಕದ್ದೊಯ್ದ ಖದೀಮರು
ಈ ಸಂಬಂಧ ಬಾರ್ ಮಾಲೀಕ ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆ ಕೈಗೊಂಡ ಇನ್ಸ್ಪೆಕ್ಟರ್ ನವೀನ್ ನೇತೃತ್ವದ ತಂಡ ಸಿಸಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ಎಂಟು ಜನರಿದ್ದ ಗ್ಯಾಂಗ್ ಅನ್ನು ಬಂಧಿಸಿ ವಿಚಾರಣೆ ಮುಂದುವರಿಸಿದೆ. ವಿಚಾರಣೆಯಲ್ಲಿ 12 ರಾಬರಿ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.