ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿ, ಕೊರೊನಾ ಹೋರಾಟಕ್ಕೆ ನೆರವಾಗಿ: ಬಿಎಸ್​ವೈ - Donate to Chief Ministers' Relief Fund: CM

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರದ ವತಿಯಿಂದ ಮಾಡಿಸಲಾಗುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ದಾನಿಗಳು ನೆರವಾಗಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕರೆ ನೀಡಿದ್ದಾರೆ.

Donate to Chief Ministers' Relief Fund: CM
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿ: ಸಿಎಂ ಮನವಿ

By

Published : Mar 25, 2020, 11:32 PM IST

ಬೆಂಗಳೂರು:ಕೊರೊನಾ ಸೋಂಕು ತಡೆಯಲು ಸರ್ಕಾರ ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ದಾನಿಗಳು ನೆರವಾಗಿ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕರೆ ನೀಡಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿ: ಸಿಎಂ ಮನವಿ
ವಿಶ್ವದೆಲ್ಲೆಡೆ ಹರಡುತ್ತಿರುವ ಸಾಂಕ್ರಾಮಿಕ ರೋಗದಿಂದ ಗಣನೀಯ ಪ್ರಮಾಣದಲ್ಲಿ ಜನರು ಸಾವಿಗೀಡಾಗುತ್ತಿದ್ದು, ಈ ಸಾಂಕ್ರಾಮಿಕ ರೋಗವು ಕರ್ನಾಟಕ ರಾಜ್ಯದಲ್ಲೂ ಕಂಡುಬಂದಿದೆ. ಈ ರೋಗವನ್ನು ತಡೆಗಟ್ಟಲು ಸರ್ಕಾರವು ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳುತ್ತಿದ್ದು, ಈ ವೈರಾಣು ಹರಡುವುದನ್ನು ನಿಯಂತ್ರಿಸಲು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಈ ರೋಗದಿಂದ ಬಳಲುತ್ತಿರುವ ಸಾರ್ವಜನಿಕರಿಗೆ ವೈದ್ಯೋಪಚಾರಗಳನ್ನು ಸರ್ಕಾರದ ವತಿಯಿಂದ ಮಾಡಿಸಲಾಗುತ್ತಿದ್ದು, ರೋಗವನ್ನು ಪತ್ತೆ ಹಚ್ಚಲು ಹೆಚ್ಚಿನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಈ ಎಲ್ಲಾ ಸರ್ಕಾರದ ಕಾರ್ಯತಂತ್ರಗಳನ್ನು ಮನಗಂಡು ಈ ವೈರಾಣು ಹರಡುವುದನ್ನು ತಡೆಗಟ್ಟಲು ತಾವು ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಕಾರ್ಯಕ್ಕಾಗಿ ದೇಣಿಗೆ ಸಲ್ಲಿಸಲು ಇಚ್ಛಿಸುವ ದಾನಿಗಳು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19, ಎಸ್‌ಬಿಐ ವಿಧಾನಸೌಧ ಶಾಖೆ, ಖಾತೆ ಸಂಖ್ಯೆ 39234923151, ಐಎಫ್ಎಸ್ಇ ಕೋಡ್ 0040277ಕ್ಕೆ ದೇಣಿಗೆ ನೀಡಬಹುದು. ಈ ರೀತಿ ಸಲ್ಲಿಸುವ ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 80 ಜಿ (2)ಅಡಿ ತೆರಿಗೆ ವಿನಾಯಿತಿ ಇದೆ ಎಂದು ಸಿಎಂ ಬಿಎಸ್​ವೈ ತಿಳಿಸಿದ್ದಾರೆ.

ABOUT THE AUTHOR

...view details