ಬೆಂಗಳೂರು: ಮುಂಬರುವ ಜಾತ್ರೆಯಲ್ಲಿ ಏನಾದರೂ ಅನಾಹುತ ಸಂಭವಿಸಿದರೆ ಬಿಬಿಎಂಪಿ, ಪೊಲೀಸ್ ಇಲಾಖೆಯೇ ಕಾರಣ ಎಂದು ಬಜರಂಗದಳ ಸಂಘಟನೆ ಎಚ್ಚರಿಕೆ ನೀಡಿದೆ.
ನ. 29ರಂದು ವಿವಿ ಪುರಂನ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದ್ದು, ಅಂದು ಸಾವಿರಾರು ಸಂಖ್ಯೆಯಲ್ಲಿ ಹಿಂದೂಗಳು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಸುಬ್ರಹ್ಮಣ್ಯ ಸ್ವಾಮಿ ಬೆಳ್ಳಿ ತೇರಿನ ವೇಳೆ ಹಿಂದೂಗಳನ್ನು ಬಿಟ್ಟು ಬೇರೆ ಧರ್ಮದ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಮುಖಂಡರಾದ ತೇಜಸ್ ಗೌಡ ಮತ್ತು ಶಿವು, ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಮತ್ತು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಮಂಗಳವಾರ ಷಷ್ಠಿ ಇರುವ ಹಿನ್ನೆಲೆ ಎಲ್ಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆಯುತ್ತದೆ. ಸಜ್ಜನ್ ರಾವ್ ಸರ್ಕಲ್ನಲ್ಲಿರುವ ಸುಬ್ರಹ್ಮಣ್ಯ ರಥೋತ್ಸವವನ್ನು ಬಹಳ ವಿಜೃಂಭಣೆಯಿಂದ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಅನ್ಯಮತೀಯರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ಬಜರಂಗದಳದ ಮುಖಂಡ ತೇಜಸ್ ಗೌಡ ಕೇಳಿಕೊಂಡಿದ್ದಾರೆ.