ಬೆಂಗಳೂರು :ವಿದ್ಯುತ್ ದರ ಏರಿಕೆ ಮಾಡಿ ಜನರಿಗೆ ಹೊರೆ ನೀಡಿದ್ದ ಕರ್ನಾಟಕ ಬಿಜೆಪಿ ಸರ್ಕಾರ ಇದೀಗ ನೀರಿನ ಶುಲ್ಕ ಕೂಡ ಹೆಚ್ಚಿಸಲು ಮುಂದಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ 'ಡಬಲ್ ಇಂಜಿನ್' ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು. ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ 'ಡಬಲ್ ಶಾಕ್' ಕೊಡಲು ಮುಂದಾಗಿದೆ. ಈ ನಿರ್ದಯಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣ ತೊಟ್ಟು ನಿಂತಿದೆ ಎಂದು ದೂರಿದ್ದಾರೆ.