ಕರ್ನಾಟಕ

karnataka

ETV Bharat / state

ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಮುಂದುವರಿಕೆ - ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಡಾ ಸಿ ಎನ್ ಮಂಜುನಾಥ್ ನೇಮಿಸಿ ಸರ್ಕಾರ ಆದೇಶ

ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮುಂದಿನ ಒಂದು ವರ್ಷಕ್ಕೆ ಮರುನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

dr-c-n-manjunath-continues-as-director-of-jayadeva-heart-hospital
ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಡಾ.ಸಿ.ಎನ್.ಮಂಜುನಾಥ್ ಮುಂದುವರಿಕೆ

By

Published : Jul 18, 2022, 10:14 PM IST

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರನ್ನಾಗಿ ಡಾ.ಸಿ.ಎನ್. ಮಂಜುನಾಥ್ ಅವರನ್ನು ಮರು ಆಯ್ಕೆ ಮಾಡಲಾಗಿದೆ.

ಜುಲೈ 19ಕ್ಕೆ ಇವರ ಅಧಿಕಾರವಧಿ ಮುಕ್ತಾಯಗೊಳ್ಳಲಿದ್ದು, ಮುಂದಿನ 1 ವರ್ಷಕ್ಕೆ ನಿರ್ದೇಶಕರಾಗಿ ಮುಂದುವರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಸ್ಥೆಯ ಆಡಳಿತ ಮಂಡಳಿಯ ಘಟನೋತ್ತರ ಅನುಮೋದನೆ ಪಡೆಯುವ ಷರತ್ತಿಗೊಳಪಟ್ಟು, ಸಂಸ್ಥೆಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಡಾ.ಸಿ.ಎನ್.ಮಂಜುನಾಥ್ ರನ್ನು ನಿರ್ದೇಶಕರಾಗಿ ಮುಂದುವರಿಸಲಾಗಿದೆ.

ಜುಲೈ 20, 2022 ರಿಂದ ಜುಲೈ 15, 2023 ರ ವರೆಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ಹುದ್ದೆಯಲ್ಲಿ ಮುಂದುವರೆಸಿ ಆದೇಶಿಸಲಾಗಿದ್ದು, ಡಾ.ಸಿ.ಎನ್.ಮಂಜುನಾಥ್ ಅವರನ್ನೇ ಮುಂದುವರಿಸುವಂತೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದರು.

ಓದಿ :ಜಿಎಸ್​ಟಿ ಹೆಚ್ಚಳದಿಂದ ಜನರು ಚಿಟ್ ಫಂಡ್​ಗಳಿಗೆ ಹಣ ಕಟ್ಟಲು ಹಿಂಜರಿಯುವಂತಾಗಿದೆ: ಬಸವಲಿಂಗಪ್ಪ

For All Latest Updates

TAGGED:

ABOUT THE AUTHOR

...view details