ಕರ್ನಾಟಕ

karnataka

ETV Bharat / state

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಬಗ್ಗೆ ಚರ್ಚಿಸಲಾಗವುದು: ಡಾ.ಸಿ.ಎನ್.‌ಅಶ್ವತ್ಥನಾರಾಯಣ - ಅತಿಥಿ ಉಪನ್ಯಾಸರು

ಹತ್ತು ವರ್ಷ ಸೇವಾವಧಿ ಪೂರೈಸಿರುವ ಉಪನ್ಯಾಸಕರ ಸೇವೆಯನ್ನು ಖಾಯಂ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದ್ದಾರೆ.

Dr. C.N. Ashwaththanarayana
ಡಾ.ಸಿ.ಎನ್.‌ಅಶ್ವತ್ಥನಾರಾಯಣ

By

Published : Mar 15, 2021, 5:30 PM IST

ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 25 ಸಾವಿರ ರೂಪಾಯಿ ವೇತನ‌ ನಿಗದಿ, ಸೇವಾ ಭದ್ರತೆ ಒದಗಿಸಲಾಗುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಭರವಸೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಮಾನವೀಯತೆ ಆಧಾರದ ಮೇಲೆ ಈ ಬೇಡಿಕೆಗಳನ್ನು ಪರಿಶೀಲನೆ ಮಾಡಲಾಗುವುದು. ಅತಿಥಿ ಉಪನ್ಯಾಸಕರ ಸೇವಾ ಸಕ್ರಮಾತಿ/ ಸೇವಾ ಭದ್ರತೆಗೆ ಸಂಬಂಧಿಸಿದಂತೆ ಮಾನವೀಯ ನೆಲೆಯಲ್ಲಿ ನಿರ್ಣಯ ಕೈಗೊಳ್ಳಬೇಕೆಂದು ಸಭಾಪತಿಗಳಾದ ಬಸವರಾಜ ಹೊರಟ್ಟಿ, ಶಿಕ್ಷಕರ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸದಸ್ಯರು ಕೂಡ ಮನವಿ ಮಾಡಿದ್ದಾರೆ.

ಪ್ರತಿ ಹನ್ನೆರಡು ತಿಂಗಳಿಗೊಮ್ಮೆ ಮರು ನೇಮಕ ಮಾಡಿಕೊಳ್ಳುವುದು ಬೇಡ. ಖಾಯಂ ಆಗುವವರೆಗೆ ಸೇವೆಯನ್ನು ನಿರಂತರವಾಗಿ ಬಳಸಿಕೊಳ್ಳುತ್ತಿರಬೇಕು. ಇನ್ನು, ಗೌರವ ಧನದ ಮೊತ್ತವನ್ನು ಮಾಸಿಕ ಕನಿಷ್ಠ 25,000 ರೂ.ಗಳನ್ನಾದರೂ ನಿಗದಿ ಮಾಡಬೇಕು ಎಂಬ ಬೇಡಿಕೆಗಳಿವೆ.ಇವೆಲ್ಲವನ್ನು ಪರಿಶೀಲನೆ ಮಾಡಲಾಗುವುದು ಎಂದಿದ್ದಾರೆ.

ABOUT THE AUTHOR

...view details