ಬೆಂಗಳೂರು:ವೃತ್ತಿ ಆಧರಿತ ಕೌಶಲ್ಯ ಹೊಂದಿರುವಂತಹ ವಿಶ್ವಕರ್ಮ ಜನಾಂಗದವರ ವಿದ್ಯೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಸರ್ಕಾರ ಗಮನಹರಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿಎನ್. ಅಶ್ವತ್ಥನಾರಾಯಣ್ ಹೇಳಿದ್ದಾರೆ.
ಪೌರತ್ವ ತಿದುದ್ದಪಡಿ ಕಾಯಿದೆ ಕುರಿತಂತೆ ಜನಜಾಗೃತಿ ಮೂಡಿಸಲು ಸರ್ಕಾರ ಹಮ್ಮಿಕೊಂಡಿರುವ ಮನೆ ಮನೆ ಸಂಪರ್ಕ ಅಭಿಯಾನದ ಭಾಗವಾಗಿ ಡಾ. ಸಿ.ಎನ್. ಅಶ್ವತ್ಥನಾರಾಯಣ್ ಜ್ಞಾನ ಪೀಠ ಪುರಸ್ಕೃತ ಸಾಹಿತಿ ಚಂದ್ರಶೇಖರ್ ಕಂಬಾರರ ಮನೆಗೆ ಭೇಟಿ ನೀಡಿ ಮಾಹಿತಿ ನೀಡಿದರು. ಈ ವೇಳೆ ಮಾತನಾಡಿದ ಅವರು, "ವೃತ್ತಿ ಆಧಾರಿತ, ಕೌಶಲ್ಯ ಇರುವ ವಿಶ್ವಕರ್ಮ ಸಮುದಾಯದವರ ವಿದ್ಯೆಯನ್ನು ಮುಂದಿನ ಪೀಳಿಗೆಯವರು ಕಲಿಯುವಂತಾಗಬೇಕು. ಈ ಸಂಬಂಧ ಕಂಬಾರರ ಸಲಹೆ ಅತ್ಯುತ್ತಮವಾಗಿದ್ದು, ಅದನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸುವುದು"ಎಂದು ಉಪಮುಖ್ಯಮಂತ್ರಿ ಹೇಳಿದರು.