ಬೆಂಗಳೂರು: ಕರ್ನಾಟಕ ಸ್ಟೇಟ್ ಮೆಡಿಕಲ್ ಸಪ್ಲೈ ಲಿಮಿಟೆಡ್‌ನ ಕಾರ್ಯ ನಿರ್ವಹಣೆಯ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಭೆ ನಡೆಸಿದರು.
ಸಂಸ್ಥೆಯ ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆ ನಡೆಸಿದರು. ಈ ಸಭೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಮತ್ತು ಆಹಾರ ಸುರಕ್ಷತಾ ಆಯುಕ್ತಾಲಯದ ಆಯುಕ್ತೆ ಮಂಜುಶ್ರೀ ಅವರು ಕೂಡ ಉಪಸ್ಥಿತರಿದ್ದರು.
ಓದಿ:ಇಂದಿನಿಂದ ಬೆಂಗಳೂರಿನಲ್ಲಿ ಕೊವಾಕ್ಸಿನ್ 3ನೇ ಹಂತದ ಕ್ಲಿನಿಕಲ್ ಪ್ರಯೋಗ
ಇತ್ತೀಚಿನ ದಿನಗಳಲ್ಲಿ ಆಹಾರದ ಗುಣಮಟ್ಟ ಮತ್ತು ಅವುಗಳ ಸುರಕ್ಷತೆ ತುಂಬಾನೆ ಮುಖ್ಯವಾಗಿದೆ. ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯಿಂದ ಮನುಷ್ಯರ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದೆ. ಹೀಗಾಗಿ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಆಯುಕ್ತಾಲಯದ ಕಾರ್ಯ ನಿರ್ವಹಣೆ ಮತ್ತು ಹೊಣೆಗಾರಿಕೆ ವಿಷಯಗಳ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಆಯುಕ್ತಾಲಯದ ಹಿರಿಯ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಚರ್ಚೆ ನಡೆಸಿದರು.