ಕರ್ನಾಟಕ

karnataka

ETV Bharat / state

ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ?: ಡಾ‌.ಕೆ.ಸುಧಾಕರ್ - ಸುಧಾಕರ್ ಟ್ವೀಟ್​​

2018ರ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯ ಪಾತ್ರ ನಿರಾಕರಿಸಲು ಸಾಧ್ಯವೇ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದ್ದಾರೆ.

Dr. K Sudhakar
ಡಾ‌.ಕೆ ಸುಧಾಕರ್

By

Published : May 17, 2023, 8:50 AM IST

Updated : May 17, 2023, 9:12 AM IST

ಬೆಂಗಳೂರು:ಸಮ್ಮಿಶ್ರ ಸರ್ಕಾರ ಪತನದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ನಿರಾಕರಿಸಲು ಸಾಧ್ಯವೇ? ಎಂದು ಮಾಜಿ ಸಚಿವ ಡಾ.ಕೆ ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ. ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು ಎಂದಿದ್ದಾರೆ.

2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿನವೂ ಹೆಚ್​.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು. ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನು, ಮುಖಂಡರನ್ನು ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ ಎಂದು ಸುಧಾಕರ್​ ಕೇಳಿದ್ದಾರೆ.

ಇದನ್ನೂ ಓದಿ:ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಏಳು-ಬೀಳಿನ ಕತೆ ಏನು? ಮೈತ್ರಿ ಸರ್ಕಾರದ ಆಸಕ್ತಿಕರ ಸಂಗತಿ!

ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣ:2018 ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. 104 ಸ್ಥಾನಗಳನ್ನು ಗೆದ್ದ ಬಿಜೆಪಿ ಅಧಿಕಾರ ಪಡೆದು ಬಿ.ಎಸ್‌.ಯಡಿಯೂರಪ್ಪ ಸಿಎಂ ಆದರು. ಆದರೆ ಸಾಬೀತುಪಡಿಸದ ಕಾರಣ 3 ದಿನಗಳ ನಂತರ ಮುಖ್ಯಮತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರಿಂದ 78 ಸ್ಥಾನ ಪಡೆದಿದ್ದ ಕಾಂಗ್ರೆಸ್‌ ಹಾಗೂ 38 ಸ್ಥಾನ ಪಡೆದಿದ್ದ ಜೆಡಿಎಸ್‌ ಸೇರಿ ಮೈತ್ರಿ ಸರ್ಕಾರ ರಚಿಸಿದ್ದರು. ಹೆಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಗಾದಿ ಏರಿದ್ದರು.

ಇದನ್ನೂ ಓದಿ:ಸಮ್ಮಿಶ್ರ ಸರ್ಕಾರಕ್ಕೆ ಸಿಗದ ಪೂರ್ಣಾವಧಿ ಆಡಳಿತ ಭಾಗ್ಯ: ಮೂರು ಪ್ರಯೋಗದಲ್ಲೂ ಸಿಎಂ ರಾಜೀನಾಮೆ

ಆದರೆ, ಮೈತ್ರಿ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡ ಕಾರಣ 16 ಮಂದಿ ಅತೃಪ್ತ ಶಾಸಕರು ಮುಂಬೈಗೆ ಹಾರಿದ್ದರು. ಇದರ ಲಾಭ ಪಡೆಯಲು ಬಿಜೆಪಿ ಆಪರೇಷನ್‌ ಕಮಲ ಆರಂಭಿಸಿತು. ಪರಿಣಾಮ, ಹಲವು ಮದಿ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಮುಂಗಾರು ಅಧಿವೇಶನದಲ್ಲಿ ಕುಮಾರಸ್ವಾಮಿ ವಿಶ್ವಾಸ ಮತ ಸಾಬೀತುಪಡಿಸದ ಕಾರಣ ಈ ಮೈತ್ರಿ ಸರ್ಕಾರ ಕೂಡ ಪತನವಾಗಿತ್ತು. ನಂತರ ಯಡಿಯೂರಪ್ಪ ಅವರೇ ಮತ್ತೆ ಸಿಎಂ ಕುರ್ಚಿ ಅಲಂಕರಿಸಿದರು. ಆದರೆ, 2 ವರ್ಷಗಳ ಬಳಿಕ ಹೈಕಮಾಂಡ್‌ ಸೂಚನೆ ಮೇರೆಗೆ ಬಿಎಸ್‌ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ನಂತರ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಇದನ್ನೂ ಓದಿ:ಕುಮಾರಸ್ವಾಮಿ ರಾಜೀನಾಮೆ ನೀಡುವುದು ಗೌರವಯುತ ಕೆಲಸ: ಬಸವರಾಜ್ ಬೊಮ್ಮಾಯಿ

Last Updated : May 17, 2023, 9:12 AM IST

ABOUT THE AUTHOR

...view details