ಬೆಂಗಳೂರು: ಮೈಸೂರು-ಚಾಮರಾಜನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಡಾ. ಡಿ. ತಿಮ್ಮಯ್ಯ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
ಡಿ ಕೆ ಶಿವಕುಮಾರ್‌ರನ್ನ ಭೇಟಿಯಾದ ಪರಿಷತ್ ನೂತನ ಸದಸ್ಯ ಡಾ.ತಿಮ್ಮಯ್ಯ - ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಪಕ್ಷದ ಆಶಯದಂತೆ ಚುನಾವಣೆಗೆ ಸ್ಪರ್ಧೆ ಮಾಡಿ ಪರಿಷತ್‌ಗೆ ಆಯ್ಕೆಯಾಗಿದ್ದೇನೆ. ಪಕ್ಷದ ನಿರೀಕ್ಷೆ ಹುಸಿಯಾಗದಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಕಾರ್ಯಕರ್ತರು,ಮುಖಂಡರನ್ನೂ ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯ ಮಾಡುತ್ತೇನೆ..
ಸದಾಶಿವನಗರ ನಿವಾಸಕ್ಕೆ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಬಿ.ಎಲ್. ಶಂಕರ್, ಡಿಸಿಸಿ ಅಧ್ಯಕ್ಷ ವಿಜಯಕುಮಾರ್ ಮತ್ತಿತರರು ಜೊತೆ ತೆರಳಿದ ಡಾ.ಡಿ ತಿಮ್ಮಯ್ಯ ಅವರು ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದರು. ಚುನಾವಣೆಯಲ್ಲಿ ನೀಡಿದ ಸಹಕಾರ, ಬೆಂಬಲಕ್ಕಾಗಿ ಧನ್ಯವಾದ ಸಲ್ಲಿಸಿದರು.
ಪಕ್ಷದ ಆಶಯದಂತೆ ಚುನಾವಣೆಗೆ ಸ್ಪರ್ಧೆ ಮಾಡಿ ಪರಿಷತ್‌ಗೆ ಆಯ್ಕೆಯಾಗಿದ್ದೇನೆ. ಪಕ್ಷದ ನಿರೀಕ್ಷೆ ಹುಸಿಯಾಗದಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಕಾರ್ಯಕರ್ತರು,ಮುಖಂಡರನ್ನೂ ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯ ಮಾಡುತ್ತೇನೆ ಎಂದು ಡಿ ಕೆ ಶಿವಕುಮಾರ್‌ಗೆ ಭರವಸೆ ನೀಡಿ ಅಗತ್ಯ ಸಹಕಾರ ನೆರವು ನೀಡುವಂತೆ ಮನವಿ ಮಾಡಿದರು.