ಕರ್ನಾಟಕ

karnataka

ETV Bharat / state

ಬಾದಾಮಿಯಲ್ಲಿ ಫೆ.12 ರಂದು ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ: ಗಣ್ಯರು ಭಾಗಿ - Badami assembly constituency in Bagalkot district

ಫೆ.12 ರಂದು ಬಾಗಲಕೋಟೆ ಜಿಲ್ಲೆಯ ಬದಾಮಿ ವಿಧಾನಸಭೆ ಕ್ಷೇತ್ರದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ. ಕ್ಷೇತ್ರದ ಶಾಸಕರೂ ಆಗಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಮಾಜ ಕಲ್ಯಾಣ ಸಚಿವರಾದ ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

banglore
ರಾಜಕೀಯ ಮುಖಂಡರು

By

Published : Feb 10, 2021, 11:42 AM IST

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಬದಾಮಿ ವಿಧಾನಸಭೆ ಕ್ಷೇತ್ರದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಫೆ.12 ರ ಶುಕ್ರವಾರದಂದು ಚಾಲನೆ ದೊರೆಯಲಿದೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಮಾಜ ಕಲ್ಯಾಣ ಸಚಿವರಾದ ಶ್ರೀರಾಮುಲು, ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕೆಲವಡಿ ಗ್ರಾಮದಲ್ಲಿ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ, ಮುಷ್ಟಿಗೇರಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೀರಲಿಂಗೇಶ್ವರ ಸಮುದಾಯ ಭವನಕ್ಕೆ ಶಿಲಾನ್ಯಾಸ, ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡದ ಉದ್ಘಾಟನೆ ನಡೆಯಲಿದೆ.

ಐತಿಹಾಸಿಕ ತಾಣವಾದ ಪಟ್ಟದಕಲ್ಲ ಗ್ರಾಮದಲ್ಲಿ ಪ್ರವಾಸೋದ್ಯಮ ಇಲಾಖೆಯ ಉದ್ದೇಶಿತ ಸಮಗ್ರ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಅಡಿಗಲ್ಲು, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ನೂತನ ಉಪ ವಿಭಾಗದ ಕಚೇರಿ ಉದ್ಘಾಟನೆ ನೆರವೇರಲಿದೆ. ಕ್ಷೇತ್ರದ ವಿವಿಧೆಡೆ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೆತ್ತಿಕೊಳ್ಳಲಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಬದಾಮಿ ಹಾಗೂ ಗುಳೇದಗುಡ್ಡ ತಾಲೂಕಿನ 16 ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಜೀವಜಲ ಮಿಷನ್ ಯೋಜನೆಗೂ ಇದೇ ವೇಳೆ ಚಾಲನೆ ಸಿಗಲಿದೆ.

ಸಿದ್ದರಾಮಯ್ಯ ಇಂದೇ ಬಾದಾಮಿಗೆ ತೆರಳಲಿದ್ದು, ಸಂಜೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಬದಾಮಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕ್ಷೇತ್ರದಲ್ಲಿಯೇ ವಾಸ್ತವ್ಯ ಹೂಡುವ ಅವರು ಶುಕ್ರವಾರ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಜೆ ಹುಬ್ಬಳ್ಳಿಗೆ ಆಗಮಿಸಿ ಅಲ್ಲಿಂದ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

For All Latest Updates

ABOUT THE AUTHOR

...view details