ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಈ ನೇಮಕಾತಿ ನಡೆಯಲಿದೆ. ಈ ಹುದ್ದೆಗಳನ್ನು ನಿಯೋಜನೆ ಆಧಾರದ ಮೇಲೆ ಭರ್ತಿ ಮಾಡಲಾಗುವುದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಭರ್ತಿ ಮಾಡಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಸೆಪ್ಟೆಂಬರ್ 15 ಆಗಿದೆ.
ಹುದ್ದೆ ವಿವರ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 28 ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕೋಡಿಯಲ್ಲಿ 1, ಕಲಬುರ್ಗಿ 1, ಧಾರವಾಡ 1, ಗದಗ 1, ಕಾರವಾರ 1, ಎಂಎಂಎಸ್ ಬೆಂಗಳೂರು 15, ಮಂಡ್ಯ 1, ಮೈಸೂರು 3, ಪುತ್ತೂರು 1, ಶಿವಮೊಗ್ಗ 1, ಉಡುಪಿ 1, ಕೋಲಾರದಲ್ಲಿ 1 ಹುದ್ದೆಗಳ ಭರ್ತಿ ನಡೆಯಲಿದೆ.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಹಗರು ಮತ್ತು ಭಾರಿ ವಾಹನಗಳ ಚಾಲನೆ ಪರವಾನಗಿ ಪ್ರಮಾಣ ಪತ್ರ ಹೊಂದಿರಬೇಕು. ಮೋಟಾರು ಮೆಕಾನಿಸಮ್ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಕನಿಷ್ಠ 3 ವರ್ಷ ಹಗುರ ಮತ್ತು ಭಾರಿ ವಾಹನಗಳ ಚಾಲನೆ ಅನುಭವ ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 56 ವರ್ಷಗಳನ್ನು ಮೀರಿರಬಾರದು.
ಆಯ್ಕೆ: ಅಭ್ಯರ್ಥಿಗಳ ವಾಹನ ಚಾಲನಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು. ಈ ಹುದ್ದೆಗಳಿಗೆ ಮಾಸಿಕ 19,900- 63,200 ವೇತನವನ್ನು ನಿಗದಿಪಡಿಸಲಾಗಿದೆ.