ಕರ್ನಾಟಕ

karnataka

ETV Bharat / state

ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕನ ಬಂಧನ : ಅಚ್ಚರಿ ಹೇಳಿಕೆ ನೀಡಿದ ಆರೋಪಿ - ಬೆಂಗಳೂರಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕ

ಜನವರಿ 26ರಂದು ಜಯನಗರದಲ್ಲಿ ಉದ್ದೇಶಪೂರ್ವಕವಾಗಿಯೇ ಕಾರನ್ನ ಬೀದಿ ನಾಯಿ ಮೇಲೆ ಹರಿಸಿ ಎಸ್ಕೇಪ್ ಆಗಿದ್ದ ಆರೋಪಿಯನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತನು ಪೊಲೀಸರ ಮುಂದೆ ತನಗೆ ನಾಯಿಗಳಂದ್ರೆನೆ ಆಗಲ್ಲ ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾನೆ.

ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕನ ಬಂಧನ
ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕನ ಬಂಧನ

By

Published : Jan 31, 2022, 8:37 PM IST

ಬೆಂಗಳೂರು: ಮಲಗಿದ್ದ ಬೀದಿ ನಾಯಿ ಮೇಲೆ‌ ಕಾರು ಹತ್ತಿಸಿ ವಿಕೃತಿ ಮೆರೆದಿದ್ದ ಕಾರು ಚಾಲಕ ಆದಿಕೇಶವನನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಆದಿಕೇಶವಲು ನಾಯ್ಡು ಮೊಮ್ಮಗ ಆದಿ ಎಂಬಾತನ ವಿರುದ್ಧ ಬದ್ರಿಪ್ರಸಾದ್ ಎಂಬುವರು ದೂರು ನೀಡಿದ್ದರು.

ಜನವರಿ 26ರಂದು ಜಯನಗರ 1st ಬ್ಲಾಕ್ 10th B ಮೇನ್​​ನಲ್ಲಿ ಚಾಲಕ‌ ಆರೋಪಿ ಉದ್ದೇಶಪೂರ್ವಕವಾಗಿಯೇ ಕಾರನ್ನ ಹರಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದ. ಕಾರು ಹತ್ತಿದ ರಭಸಕ್ಕೆ ನಾಯಿ ವಿಲವಿಲ ಒದ್ದಾಡಿ ಪ್ರಾಣಬಿಟ್ಟಿತ್ತು.

ಇದನ್ನೂ ಓದಿ : ಬೆಂಗಳೂರಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ವಿಕೃತಿ ಮೆರೆದ ಚಾಲಕ: ಸಿಸಿಟಿವಿಯಲ್ಲಿ ದುಷ್ಕೃತ್ಯ ಸೆರೆ

ಘಟನೆಯ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.‌ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ನಾಯಿಗಳನ್ನು ಕಂಡರೆ ನನಗೆ ಆಗುವುದಿಲ್ಲ, ಹೀಗಾಗಿ ಆ ಶ್ವಾನದ ಮೇಲೆ ಕಾರು ಹತ್ತಿಸಿದ್ದೇ ಎಂದು ಹೇಳಿಕೆ ಕೊಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ABOUT THE AUTHOR

...view details