ಬೆಂಗಳೂರು : ಗಾಂಜಾ ಮಾರಾಟ ಮಾಡಿ ಕೋಟಿಗಟ್ಟಲೇ ಆಸ್ತಿ ಸಂಪಾದನೆ ಮಾಡಿದ್ದ ಎನ್ನಲಾಗಿರುವ ಆರೋಪಿಯ ಆಸ್ತಿಯನ್ನು ಇದೀಗ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಗಾಂಜಾ ಮಾರಾಟ ಕೇಸ್ನಲ್ಲಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಡ್ರಗ್ ಪೆಡ್ಲರ್ ಆಸ್ತಿಯನ್ನು ಜಪ್ತಿ ಮಾಡಲಾಗಿದೆ.
ಸೂರ್ಯಸಿಟಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಜಾ ಮಾರಾಟ ಮಾಡಿ ಕೋಟಿಗಟ್ಟಲೆ ಆಸ್ತಿ ಸಂಪಾದನೆ ಮಾಡಿದ್ದ ಆರೋಪಿ ಬಿಹಾರ ಮೂಲದ ಅಂಜಯ್ ಕುಮಾರ್ ಸಿಂಗ್ ಎಂಬಾತನ ಆಸ್ತಿಯನ್ನು ಪೊಲೀಸರು ಸೀಜ್ ಮಾಡಿದ್ದಾರೆ.
2019ರಲ್ಲಿ ಅಂಜಯ್ ಕುಮಾರ್ ಸಿಂಗ್ನನ್ನು ಪೊಲೀಸರು ಬಂಧಿಸಿದ್ದರು. ಆರೋಪಿಯನ್ನು ಬಂಧಿಸಿ 822 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈಗಾಗಲೇ ಆರೋಪಿಯ ಕೃತ್ಯದ ಬಗ್ಗೆ ದೋಷಾರೋಪಣಾ ಪಟ್ಟಿಯನ್ನ ಕೋರ್ಟ್ಗೆ ಸಲ್ಲಿಸಲಾಗಿದೆ.