ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಪ್ರಕರಣ ಸಂಬಂಧ ಬಂಧಿತನಾಗಿರುವ ವೀರೇನ್ ಖನ್ನಾ ಪೊಲೀಸ್ ಕಸ್ಟಡಿ ಇಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರ ಜೊತೆ ಕೋವಿಡ್ ಪರೀಕ್ಷೆಯನ್ನೂ ಮಾಡಿಸಲಾಗಿದೆ.
ವೀರೇನ್ ಖನ್ನಾ ಪೊಲೀಸ್ ಕಸ್ಟಡಿ ಇಂದು ಅಂತ್ಯ... ಜಾಮೀನು ಸಿಗದಿದ್ದರೆ ಜೈಲೂಟ - ಬೆಂಗಳೂರು ಇತ್ತೀಚಿನ ಸುದ್ದಿ
ಸ್ಯಾಂಡಲ್ವುಡ್ಗೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ಇಂದು ಆರೋಪಿ ವೀರೇನ್ ಖನ್ನಾನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಬಾಣಸವಾಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಪ್ರತೀಕ್ ಶೆಟ್ಟಿ ಹಾಗೂ ವೀರೇನ್ ಖನ್ನಾ ನಡುವಿನ ಲಿಂಕ್ ಕುರಿತು ಕಳೆದ ಐದು ದಿನಗಳಿಂದ ವಿಚಾರಣೆ ನಡೆಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ ಆಪ್ತ ರವಿಶಂಕರ್ ಕೊಟ್ಟ ಹೇಳಿಕೆ ಆಧರಿಸಿ ವಿಚಾರಣೆ ನಡೆಸಲಾಗಿದೆ. ವೈದ್ಯಕೀಯ ಪರೀಕ್ಷೆಗೊಳಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ತನಿಖಾಧಿಕಾರಿಗಳು ಕೇಳುವ ಸಾಧ್ಯತೆಯಿದೆ.
ಇಂದು ಮಧ್ಯಾಹ್ನದ ಬಳಿಕ ವೀರೇನ್ ಖನ್ನಾ ಜಾಮೀನು ಅರ್ಜಿ ವಿಚಾರಣೆ ಎನ್‌ಡಿಪಿಎಸ್ ವಿಶೇಷ ಕೋರ್ಟ್ನಲ್ಲಿ ನಡೆಯಲಿದೆ. ಈಗಾಗಲೇ ಸಂಜನಾ, ರಾಗಿಣಿ, ರಾಹುಲ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ವೀರೇನ್ ಖನ್ನಾ ಜಾಮೀನು ಅರ್ಜಿಯೂ ವಜಾಗೊಳ್ಳುವ ಸಾಧ್ಯತೆಯಿದೆ.