ಬೆಂಗಳೂರು : ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಮತ್ತು ಹವಾಲಾ ಮೂಲಕ ಹಣ ಸಾಗಿಸಿರುವ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದ ಕೇರಳದ ಮಾಜಿ ಗೃಹ ಸಚಿವ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ನನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಡ್ರಗ್ಸ್ ಪ್ರಕರಣ; ಬಿನೀಶ್ ಕೊಡಿಯೇರಿಗೆ ನ್ಯಾಯಾಂಗ ಬಂಧನ - Bineesh Kodiyeri latest news
ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಆರೋಪಿ ಬಿನೀಶ್ನನ್ನು ಮೂೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದ ಬಳಿಕ ಆರೋಪಿಯನ್ನು ಇಂದು ನಗರದ ಎನ್ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಡ್ರಗ್ಸ್ ಜಾಲದ ಪ್ರಮುಖ ಆರೋಪಿ ಅನೂಪ್ ಜೊತೆಗೆ ವ್ಯವಹಾರ ಇಟ್ಟುಕೊಂಡಿದ್ದು ಹಾಗೂ ಹವಾಲಾ ಮೂಲಕ ಹಣ ಸಾಗಣೆ ಮಾಡಿದ್ದ ಆರೋಪದಡಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿನೀಶ್ನನ್ನು ಬಂಧಿಸಿದ್ದರು. ಸಾಕಷ್ಟು ವಿಚಾರಣೆ ನಡೆಸಿದ ಬಳಿಕ ಇಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.
ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಕುರಿತು ಹೆಚ್ಚಿನ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಆರೋಪಿ ಬಿನೀಶ್ನನ್ನು ಮೂೂರು ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಕಸ್ಟಡಿ ಅವಧಿ ಮುಗಿದ ಬಳಿಕ ಆರೋಪಿಯನ್ನು ಇಂದು ನಗರದ ಎನ್ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.