ಬೆಂಗಳೂರು : ನಗರದಲ್ಲಿರುವ ಉತ್ತರ ಭಾರತದ ಕೂಲಿ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಮಣಿಪುರ ಮೂಲದ ಆರೋಪಿಯನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.
28 ವರ್ಷದ ಬುಗೇ ದುಲತ್ ಖಾನ್ ಬಂಧಿತ ಆರೋಪಿ. ಈತನಿಂದ 1.3 ಲಕ್ಷದ ಮೌಲ್ಯದ 62 ಗ್ರಾಂ ಹೆರಾಯಿನ್ ಜಪ್ತಿ ಮಾಡಿಕೊಂಡಿದ್ದಾರೆ. ಹಲಸೂರಿನಲ್ಲಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ ಡ್ರಗ್ ಸಪ್ಲೈ ಮಾಡುತ್ತಿದ್ದ.