ಕರ್ನಾಟಕ

karnataka

ETV Bharat / state

ಹೊಸ ವರ್ಷದ ಸಂಭ್ರಮಾಚರಣೆ: ಮದ್ಯದ ನಶೆಯಲ್ಲಿ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು - ಮದ್ಯದ ಅಮಲಿನಲ್ಲಿ ಕಟ್ಟಡದಿಂದ ಬಿದ್ದ ಕಾರ್ಮಿಕ

ಹೊಸ ವರ್ಷದ ಸಂಭ್ರಮದಲ್ಲಿ ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡಿದ್ದ ಯುವಕನೋರ್ವ ಮದ್ಯದ ಅಮಲಿನಲ್ಲಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ತಡರಾತ್ರಿ ಬೆಂಗಳೂರಿನಲ್ಲಿ ನಡೆದಿದೆ.

worker
ಕಾರ್ಮಿಕ ಸಾವು

By

Published : Jan 1, 2023, 1:29 PM IST

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಮದ್ಯದ ಅಮಲಿನಲ್ಲಿ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಸಾವನ್ನಪ್ಪಿರುವ ದಾರುಣ ಘಟನೆ ತಡರಾತ್ರಿ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಒಡಿಶಾ ಮೂಲದ ಬಾಪಿ (29) ಮೃತ ಕಾರ್ಮಿಕ.

ಕಟ್ಟಡ ನಿರ್ಮಾಣ ಕಾರ್ಮಿಕನಾಗಿದ್ದ ಬಾಪಿ, ಹೊಸ ವರ್ಷದ ಸಂಭ್ರಮದಲ್ಲಿ ಸ್ನೇಹಿತರೊಂದಿಗೆ ಸೇರಿ ಪಾರ್ಟಿ ಮಾಡಿದ್ದಾನೆ. ಬಳಿಕ ಮದ್ಯದ ನಶೆಯಲ್ಲಿ ಕಟ್ಟಡದಿಂದ ಜಂಪ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಆಯತಪ್ಪಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ. ಸ್ಥಳಕ್ಕೆ ಭೇಟಿ ನೀಡಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು‌ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಹೊಸ ವರ್ಷದ ಖುಷಿಗೆ ಗುಂಡು ಹಾರಿಸಿ ಯುವಕನಿಗೆ ಗಾಯ: ಹೃದಯಾಘಾತದಿಂದ ವ್ಯಕ್ತಿ ಸಾವು

ABOUT THE AUTHOR

...view details