ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ. 3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.38.75ಗೆ ಏರಿಕೆಯಾಗಿದೆ. UGC/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸಿ (ಶೇ.46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು 4 ಶೇ. ದಷ್ಟು ಹೆಚ್ಚಿಸಿ ಸಿಹಿ ಸುದ್ದಿ ನೀಡಿತ್ತು. ಅ. 18ರಂದು ಕೇಂದ್ರ ಸರ್ಕಾರ ಈ ಘೋಷಣೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ತನ್ನ ನೌಕರರ ಡಿಎಯನ್ನು 3.75 ಶೇ. ಹೆಚ್ಚಿಸಿ ಹಬ್ಬಕ್ಕೆ ಗುಡ್ ನ್ಯೂಸ್ ನೀಡಿದೆ. ಕೇಂದ್ರ ಸರ್ಕಾರ ಡಿಎ ಹೆಚ್ಚಿಸಿದ ಹಿನ್ನೆಲೆ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು.
ಇದೀಗ ರಾಜ್ಯ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಹಬ್ಬದ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.3.75ರಷ್ಟು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.