ಬೆಂಗಳೂರು:ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ರಾಜ್ಯದ ನಾಯಕರು ಒತ್ತಡ ಹೇರುತ್ತಿದ್ದಾರೆ. ಆದರೆ ಹೊಸಬರಿಗೆ ಅವಕಾಶ ನೀಡಲು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದೇನೆ. ಮುಂದೇನಾಗುತ್ತದೆ ನೋಡೋಣ ಎಂದು ಡಿ.ವಿ.ಸದಾನಂದ ಗೌಡ ತಿಳಿಸಿದರು.
ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್.ಅಶೋಕ್ ನಿನ್ನೆ ನಮ್ಮ ಮನೆಗೆ ಬಂದಿದ್ದರು. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಬೇಕು, ನಿಮ್ಮ ಅವಶ್ಯಕತೆ ಇದೆ ಎಂದಿರುವುದು ನಿಜ. ಆದರೆ ಅವರಷ್ಟೇ ಅಲ್ಲ, ನಮ್ಮ ಎಲ್ಲ ಮಾಜಿಮಂತ್ರಿಗಳೂ, ಶಾಸಕರೂ ಎಲ್ಲರೂ ಕೂಡ ನಿತ್ಯ ಫೋನ್ ಮಾಡಿ ಒತ್ತಡ ಹಾಕುತ್ತಿದ್ದಾರೆ ಎಂದರು.